Thursday, June 18, 2026
Thursday, June 18, 2026

Chandragutti Renukamba Temple ಚಂದ್ರಗುತ್ತಿಯಲ್ಲಿ ಗುರು ಪೂರ್ಣಿಮೆ ಸಂಭ್ರಮ

Date:

Chandragutti Renukamba Temple ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಗುರುಪೂರ್ಣಿಮೆ ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ಚಂದ್ರಗುತ್ತಿ ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಳೆಯನ್ನು ಲೆಕ್ಕಿಸದೇ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯ ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.

Chandragutti Renukamba Temple ದೇವರ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು‌. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದ ರಥ ಬೀದಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು.

ರಾಜ್ಯ ಸರ್ಕಾರ ರಾಜ್ಯದಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಂದ್ರಗುತ್ತಿಯಲ್ಲಿ ನಾರಿ ಶಕ್ತಿ ಪ್ರದರ್ಶನವಾಯಿತು. ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನಕ್ಕೆ ಬಯಲು ಸೀಮೆ ಮತ್ತು ಉತ್ತರ ಕರ್ನಾಟಕ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿರುವುದು ವಿಶೇಷವಾಗಿದೆ. ಅಲ್ಲದೆ ಹುಣ್ಣಿಮೆಯ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು‌.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...