Government Women’s Residential Polytechnic Shivamogga 2023-24 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕರ‍್ಸ್ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಮಾಡಿರುವ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಕಮರ್ಷಿಯಲ್ ಪ್ರಾಕ್ಟಿಸ್, ಅಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕರ‍್ಸ್ಗಳಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ. ಐಟಿಐ ದ್ವಿತೀಯ ಪಿಯುಸಿ(ವಿಜ್ಞನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ)ವರ್ಗಾವಣೆ ಪ್ರಮಾಣ ಪತ್ರ/ಎನ್ಓಸಿ, 5 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರವನ್ನು ಸಲ್ಲಿಸಬೇಕು.
Government Women’s Residential Polytechnic Shivamogga ದಿನಾಂಕ: 15-07-2023 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರವಿನಾಯ್ಕ.ಡಿ, ಪ್ರಾಂಶುಪಾಲರು ಮೊ.ಸಂ: 9886610245 ಹಾಗೂ ರುದ್ರೇಶ್ ಡಿ ಎನ್ ಪ್ರವೇಶ ಸಂಪರ್ಕಾಧಿಕಾರಿ ಮೊ.ಸಂ:9686396494 ನ್ನು ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.