Bagless Day ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರದ ಹೆಸರಿನಲ್ಲಿ ಕಾರ್ಯಕ್ರಮ ನಡೆಯುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮಕ್ಕಳಿಗೆ ಪಠ್ಯವನ್ನು ಹೋರೆಯಾಗಿಸದೆ ಖುಷಿಯಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಈ ಸಂತಸದ ವಿಚಾರವನ್ನು ತಂದಿದೆ.
ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶ ನೀಡಿದೆ. 2023 24 ನೇ ಸಾಲಿನಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನ ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ. ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಈ ಕಾರ್ಯಕ್ರಮಕ್ಕೆ ಅನುಷ್ಠಾನಕ್ಕೆ ತಂದಿದ್ದರು. ಈ ಕಾರ್ಯಕ್ರಮ ನಾನಾ ಕಾರಣಗಳಿಂದ ಅನುಷ್ಠಾನಗೊಳ್ಳಲು ಸ್ಥಗಿತವಾಗಿತ್ತು. ನೂತನ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ Bagless Day ಸುರೇಶ್ ಕುಮಾರ್ ಇತ್ತೀಚಿಗಷ್ಟೇ ಪತ್ರವನ್ನು ಬರೆದು ಮನವಿ ಮಾಡಿದ್ದರು. ಶಿಕ್ಷಣ ಇಲಾಖೆ ಯು ಅನುಷ್ಠಾನ ಮಾಡಲು ಸೂಚನೆ ನೀಡಿದೆ.