Friday, March 20, 2026
Friday, March 20, 2026

Gnana Ganga Vidya Samsthe School ಗಾಡಿಕೊಪ್ಪ ಜ್ಞಾನಗಂಗಾ ವಿದ್ಯಾ ಸಂಸ್ಥೆ ಪ್ರೌಢಶಾಲೆಗೆ ಶೇ.100 ಫಲಿತಾಂಶ

Date:

Gnana Ganga Vidya Samsthe School 2022 – 23 ರ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಗಾಡಿಕೊಪ್ಪದಲ್ಲಿರುವ ಜ್ಞಾನಗಂಗಾ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳೂ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವುದರಿಂದ ಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ.

ಶಿವಮೊಗ್ಗ ತಾಲ್ಲೂಕಿನ ಕೆಲವೇ ಶಾಲೆಗಳು ಈ ರೀತಿಯ ಫಲಿತಾಂಶವನ್ನು ದಾಖಲಿಸಿವೆ, ಈ ಸಾಧನೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆಯು ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ನೆನಪಿನ ಗೌರವ ಸ್ಮರಣಿಕೆಯನ್ನು ನೀಡಿ ಗೌರವಿಸಿದೆ.

ಈ ಪೈಕಿ ಜ್ಞಾನಗಂಗಾ ವಿದ್ಯಾಸಂಸ್ಥೆಗೂ ಗೌರವ ಸ್ಮರಣಿಕೆ ದೊರೆತಿದ್ದು ಇದಕ್ಕೆ ಕಾರಣಕರ್ತರಾದ ಎಲ್ಲಾ ವಿದ್ಯಾರ್ಥಿಗಳಿಗೆ, ಮಾರ್ಗದರ್ಶನ ಮಾಡಿದ ಎಲ್ಲಾ ಶಿಕ್ಷಕರಿಗೆ, ಶಾಲೆಯ ಪ್ರಾಂಶುಪಾಲರಿಗೆ ಹಾಗೂ ಜ್ಞಾನಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಗೆ ಶಾಲಾ ಶಿಕ್ಷಣ ಇಲಾಖೆಯು ಅಭಿನಂದನೆಯನ್ನು ಸಲ್ಲಿಸುವ ಮುಖಾಂತರ ಗೌರವ ಸ್ಮರಣಿಕೆಯನ್ನು ಕೊಟ್ಟು ಗೌರವಿಸಿದೆ.

Gnana Ganga Vidya Samsthe School ಈ ಗೌರವ ಸ್ಮರಣಿಕೆಯ ವಿತರಣೆಯ ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿಗಳಾದ ಶ್ರೀ ಪರಮೇಶ್ವರಪ್ಪ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗರಾಜ್ ಮತ್ತು ಶಿಕ್ಷಣ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಜ್ಞಾನಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರು ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...