Karnataka CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತ ಸಮುದಾಯಕ್ಕೆ ಮೀಸಲಿರಿಸಿ ರುವ ಹಣ ದಲಿತರಿಗೆ ಬಳಕೆಯಾಗಬೇಕೆಂಬ ಬಜೆಟ್‌ನಲ್ಲಿ ತೀರ್ಮಾನಿಸಿರುವುದು ಜನಾಂಗಕ್ಕೆ ಸಲ್ಲಿಸಿದಂತಹ ಗೌರವ ಎಂದು ಕೆಪಿಸಿಸಿ ಸಂಯೋಜಕ ಹಿರೇಮಗಳೂರು ರಾಮಚಂದ್ರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಶನಿವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ದಲಿತರಿಗೆ ಮೀಸಲಿರಿಸಿದ ಅನುದಾನವನ್ನು ಬೇರೆ ಇಲಾಖೆಗೆ ವರ್ಗಾಯಿಸಲಾಗುತ್ತಿತ್ತು. ಇದೀಗ ಕೈಬಿಡುವ ಮೂಲಕ ಯಾವ ಉದ್ದೇಶಕ್ಕಾಗಿ ಅನುದಾನ ಮೀಸಲಿಡ ಲಾಗುತ್ತದೆಯೋ ಕಡ್ಡಾಯವಾಗಿ ಅದೇ ಉದ್ದೇಶಕ್ಕಾಗಿ ಬಳಕೆ ಮಾಡಬೇಕು ಎಂದು ಆದೇಶಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ಒದಗಿಸಿದೆ. ಸ್ವಾಲ ವಂಬಿ ಸಾರಥಿ ಯೋಜನೆಯಡಿ ನಿರುದ್ಯೋಗ ಯುವಜನರು ಕಾರು ಖರೀದಿಸಲು ಪಡೆಯುವ ಸಾಲದ ಶೇ.25 ರಷ್ಟು ಗರಿಷ್ಟ 4 ಲಕ್ಷ ರೂ. ಸಹಾಯಧನ ನೀಡಲು ನಿರ್ಧರಿಸಲಾಗಿದೆ. ದಲಿತ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ಈ ಬಾರಿಯ ಬಜೆಟ್‌ನಲ್ಲಿ ಪ್ರೋತ್ಸಾಹಿಸಿರುವುದು ಖುಷಿಯ ಸಂಗತಿ ಎಂದಿದ್ದಾರೆ.
Karnataka CM Siddaramaiah ರಾಜ್ಯದ ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡದ ಕುಟುಂಬಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಯೋಜನೆಯನ್ನು ಆರು ತಿಂಗಳಿನಿಂದ ಒಂದು ವರ್ಷಕ್ಕೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಈ ಯೋಜನೆ ಗಾಗಿ ವಾರ್ಷಿಕ 50 ಕೋಟಿ ರೂ. ಮೀಸಲಿಡಲಾಗಿದೆ. ಜೊತೆಗೆ ಎಸ್ಸಿ, ಎಸ್ಟಿ ಸೇರಿದ ಕ್ರೈಸ್ತ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಮತ್ತು ಉತ್ತಮ ಗುಣಮಟ್ಟದ ಕ್ರೀಡಾ ಸೌಲಭ್ಯವನ್ನು ಒದಗಿಸಲು 20 ಕೋಟಿ ರೂ. ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.