Sunday, August 23, 2026
Sunday, August 23, 2026

Suduru Bridge near Ripon Town ಸೂಡೂರು ಸೇತುವೆ ಬಳಿ ಅಪಘಾತ:ಟ್ರಾಫಿಕ್ ಜಾಂ

Date:

Suduru Bridge near Ripon Town ರಿಪ್ಪನ್ ಪೇಟೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಗುದ್ದಿದ ಪರಿಣಾಮ ಲಾರಿಯ ಮುಂಭಾಗ ಜಖಂಗೊಂಡಿದೆ. ಚಾಲಕ ಹಾಗೂ ನಿರ್ವಾಹಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ದಿಢೀರನೆ ಶಿವಮೊಗ್ಗ ಕಡೆಯಿಂದ ಆಗಮಿಸಿದ ಖಾಸಗಿ ಬಸ್ಸೊಂದು ನಡೆದ ಅಪಘಾತವನ್ನು ಗಮನಿಸದೆ ನುಗ್ಗಿದ ಪರಿಣಾಮ ಇನ್ನೊಂದು ಅಪಘಾತವಾಗುವ ಘಟನೆ ತಪ್ಪಿದೆ. ಹಾಗೂ ಲಾರಿಯನ್ನು ತೆರವುಗೊಳಿಸುವಲ್ಲಿ ಖಾಸಗಿ ಬಸ್ ಅಡ್ಡಿಯುಂಟಾಗಿತ್ತು.

Suduru Bridge near Ripon Town ಸತತ 5 ಗಂಟೆಗಳ ಕಾಲ ಸಂಚಾರ ಅರ್ಥವ್ಯಸ್ತಗೊಂಡಿದೆ. ತಾತ್ಕಾಲಿಕವಾಗಿ ವಾಹನಗಳು ಅನ್ಯಮಾರ್ಗದಲ್ಲಿ ಸಂಚರಿಸುತ್ತಿದ್ದವು. ಸ್ಥಳಕ್ಕೆ ಆಗಮಿಸಿದ ಆಯನೂರು ಪೊಲೀಸರು ಲಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...