Saturday, December 6, 2025
Saturday, December 6, 2025

MLA Gopalakrishna Belur ಸಾಗರದಲ್ಲಿ ಮಳೆಯಿಂದಾಗಿ ಶಾಲಾ ಕಾಂಪೌಂಡ್ ನೆಲಸಮ: ಶಾಸಕರ ಭೇಟಿ

Date:

MLA Gopalakrishna Belur ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಪರೀತ ಮಳೆಯಿಂದ ನಗರಸಭಾ ವ್ಯಾಪ್ತಿಯ 25ನೇ ವಾರ್ಡಿನಲ್ಲಿ ಇರುವ ಅರಳಿಕಟ್ಟೆ ಸರ್ಕಾರಿ ಉರ್ದು ಶಾಲೆಯ ಮುಂಭಾಗದ ಕಾಂಪೌಂಡು ನೆಲಸಮವಾಗಿರುವ ಘಟನೆ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಭಾನುವಾರ ಸಾಗರ-ಹೂಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರು ಶಾಲೆಯ ಕಾಂಪೋಂಡ್ ಬಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂಪೋಂಡ್ ಕುಸಿದಿರುವ ಜೊತೆಗೆ ಕೊಠಡಿಗಳು ಸಹ ಶಿಥಿಲಾವಸ್ಥೆಯಲ್ಲಿದೆ. ಈ ಹಿನ್ನೆಲೆಯಲ್ಲಿ ನಗರಸಭೆಯಿಂದ ಕಾಂಪೋಂಡ್ ನಿರ್ಮಾಣ ಮಾಡಲು ತಿಳಿಸಲಾಗಿದೆ.

MLA Gopalakrishna Belur ಮಕ್ಕಳಿಗೆ ಶಿಕ್ಷಣಕ್ಕೆ ತೊಂದರೆಯಾಗದಂತೆ ಐದು ಕೊಠಡಿಗಳನ್ನು ತಾತ್ಕಾಲಿಕವಾಗಿ ರಿಪೇರಿ ಮಾಡಲು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉರ್ದು ಶಾಲೆಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...