Monday, February 2, 2026
Monday, February 2, 2026

Holehonur in Shivamogga District ಹೊಳೆಹೊನ್ನೂರಿನಲ್ಲಿ ಶ್ರೀಸತ್ಯಾತ್ಮ ತೀರ್ಥರ ಚಾತುರ್ಮಾಸ ವ್ರತಾನುಷ್ಠಾನ

Date:

Holehonur in Shivamogga District ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ತಮ್ಮ 28ನೇ ಚಾತುರ್ಮಾಸ್ಯ ವ್ರತವನ್ನು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕ್ಷೇತ್ರದಲ್ಲಿ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀಪಾದಂಗಳವರು ಜು.11ರ ಮಂಗಳವಾರ ಸಂಜೆ 5 ಗಂಟೆಗೆ ಹೊಳೆಹೊನ್ನೂರು ಪುರಪ್ರವೇಶ ಮಾಡಲಿದ್ದಾರೆ.

ಹೊಳೆಹೊನ್ನೂರು ಸರ್ಕಲ್‌ನಿಂದ ಶ್ರೀಮನ್ ಮೂಲಸೀತಾ ರಾಮಚಂದ್ರ ದೇವರು ಹಾಗೂ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಗುವುದು.

ಬಳಿಕ ಶ್ರೀಪಾದರು ಬೃಂದಾವನದಲ್ಲಿ ಸನ್ನಿಹಿತರಾಗಿರುವ ತಮ್ಮ ಪರಂಪರೆಯ ಪೂರ್ವಗುರುಗಳಾದ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರ ಮೂಲ ಬೃಂದಾವನದ ದರ್ಶನಾಶೀರ್ವಾದ ಪಡೆಯಲಿದ್ದಾರೆ. ಆನಂತರ ವಿದ್ವತ್ ಸಭಾ ಕಾರ್ಯಕ್ರಮವಿದೆ. ಜು.12ರಂದು ಶ್ರೀ ಸತ್ಯಧರ್ಮ ತೀರ್ಥರ ಅನುಗ್ರಹದೊಂದಿಗೆ ಶ್ರೀ ಸತ್ಯಾತ್ಮ ತೀರ್ಥರು ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಲಿದ್ದಾರೆ.

ಉತ್ತರಾದಿ ಮಠಾಧೀಶರ ಈ ಚಾತುರ್ಮಾಸ್ಯ ಕಾರ್ಯಕ್ರಮ ಜು.12ರಿಂದ ಸೆ.29ರವರೆಗೆ ಹೊಳೆಹೊನ್ನೂರಿನಲ್ಲಿ ನಡೆಯಲಿದೆ. 80 ದಿನಗಳ ಈ ಅದ್ಧೂರಿಯ ಕಾರ್ಯಕ್ರಮದಲ್ಲಿ ನಾಡಿನ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿದಿನ ಶ್ರೀಗಳಿಂದ ಸಂಸ್ಥಾನ ದೇವರ ಪೂಜೆ, ವಿವಿಧ ವಿದ್ವಾಂಸರಿಂದ ಪ್ರವಚನ, ಹಬ್ಬ ಹರಿದಿನಗಳಂದು ವಿಶೇಷ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಮಂಡಳಿಗಳಿಂದ ಭಜನೆ, ಲೋಕಕಲ್ಯಾಣಾರ್ಥ ಹೋಮ ಹವನಾದಿಗಳು ನಡೆಯಲಿವೆ.

Holehonur in Shivamogga District ನಿತ್ಯವೂ ನಡೆಯುವ ವಿದ್ವತ್ ಸಭೆಯ ಕೊನೆಯಲ್ಲಿ ಶ್ರೀ ಸತ್ಯಾತ್ಮ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ.
ಚಾತುರ್ಮಾಸ್ಯ ಸಂಬಂಧ ಮಾಹಿತಿಗಾಗಿ ಶ್ರೀನಿವಾಸಾಚಾರ್ಯ ನವರತ್ನ 9481064750 ಪುರುಷೋತ್ತಮಾಚಾರ್ಯ ನವರತ್ನ –9483721572 ರಘೂತ್ತಮಾಚಾರ್ಯ ಸೊಂಡೂರ್ 8762406466 ಇವರನ್ನು ಸಂಪರ್ಕಿಸಲು ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...