Saturday, December 6, 2025
Saturday, December 6, 2025

Jain Saint Murder ಜೈನಮುನಿಗಳ ಹತ್ಯೆ ಘೋರ ಅಪರಾಧ-ಶ್ರೀವೃಷಭಸೇನ ಭಟ್ಟಾರಕ ಸ್ವಾಮೀಜಿ

Date:

Jain Saint Murder ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮ‌ಕುಮಾರ ನಂದಿ ಮಹಾರಾಜರ ಹತ್ಯೆ ಅತ್ಯಂತ ದುಃಖದ ಹಾಗೂ ಖಂಡನೀಯ ವಿಷಯ ಎಂದು ಲಕ್ಕವಳ್ಳಿಯ ಮೋಕ್ಷ ಮಂದಿರ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ವಿಷಾಧ ವ್ಯಕ್ತಪಡಿಸಿದರು.

ಸೊರಬ ತಾಲೂಕಿನ ಲಕ್ಕವಳ್ಳಿಯ ಶ್ರೀ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಕುಮಾರನಂದಿ ಮಹಾರಾಜರನ್ನು ತೀವ್ರ ಹಿಂಸಾತ್ಮಕವಾಗಿ ಹತ್ಯೆ ಮಾಡಲಾಗಿದೆ. ಜಗತ್ತಿಗೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ಜೈನ ಸಮಾಜದ ಮುನಿಗಳನ್ನು ಅಮಾನುಷವಾಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಶ್ರೀಗಳ ಹತ್ಯೆ ಘಟನೆಯಿಂದ ಅಲ್ಪ ಸಂಖ್ಯಾತರ ಜೈನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆಧ್ಯಾತ್ಮ ಪ್ರವರ್ತಕರು, ಶಾಂತಿ ಪ್ರಿಯರು ಮತ್ತು ಅಹಿಂಸಾ ಪ್ರತಿಪಾದಕರಾದ ಜೈನ ಮುನಿಗಳಿಗೆ ಅಹಿತಕರ ಘಟನೆಗಳಿಂದ ತೊಂದರೆಯಾಗದಂತೆ ಭದ್ರತಾ ಕ್ರಮ ಕೈಗೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

Jain Saint Murder ಈ ಸಂದರ್ಭದಲ್ಲಿ ಸುರೇಶ್ ವೀರಾಪುರ, ಸೋಮಪ್ಪ ಜೈನರ್ ತಲಗಡ್ಡೆ ಸೇರಿದಂತೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...