Kalasapur village of Chikkamagaluru taluk ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಯು ಮನುಷ್ಯನ ಮೂಲಭೂತ ಹಕ್ಕಾಗಿದೆ. ಉತ್ತಮ ಆರೋಗ್ಯ ಹೊಂದಿ ಗೌರವಯುತ ಜೀವನ ನಡೆಸಲು ಮುಂದಾಗಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರು ತಾಲ್ಲೂಕಿನ ಕಳಸಾಪುರ ಗ್ರಾಮದಲ್ಲಿ ಗ್ರಾಮೀಣಾಭೀವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿ.ಪಂ., ತಾ.ಪಂ. ಹಾಗೂ ಕಳಸಾಪುರ ಗ್ರಾ.ಪಂ. ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಘಟಕ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಕಲುಷಿತವಾಗಿ ಅನಾರೋಗ್ಯಕರ ಜೀವನವು ಕುಟುಂಬದ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಆ ನಿಟ್ಟಿನಲ್ಲಿ ಮನೆಹಂತದಲ್ಲಿ ತ್ಯಾಜ್ಯ ವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸೂಕ್ತ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಹೊಂದಿರಬೇಕಾಗುತ್ತದೆ ಎಂದರು.
ತ್ಯಾಜ್ಯ ವಿಂಗಡಣೆ ಮತ್ತು ಸೂಕ್ತ ಸಂಗ್ರಹಣೆ- ಸಂಸ್ಕರಣೆ ವ್ಯವಸ್ಥೆಯನ್ನು ಕಲ್ಪಿಸುವುದು ಗ್ರಾಮ ಪಂಚಾ ಯಿತಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಜೊತೆಗೆ ಸಮುದಾಯದ ಸಹಭಾಗಿತ್ವವೂ ಸಹ ಗಣನೀಯ ಪಾತ್ರ ವಹಿಸುತ್ತದೆ. ಇದೀಗ ಗ್ರಾಮದಲ್ಲಿ ವ್ಯವಸ್ಥಿತ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ವ್ಯವಸ್ಥೆಯನ್ನು ಕಲ್ಪಿಸಿ ಚಾಲನೆ ನೀಡಿರುವುದು ಖುಷಿಯ ಸಂಗತಿ ಎಂದರು.
ಗ್ರಾಮಗಳಲ್ಲಿಯೂ ಶುಚಿತ್ವ ಕಾಪಾಡಲು ಮತ್ತು ಘನ, ದ್ರವ ತ್ಯಾಜ್ಯವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದನ್ನು ಗ್ರಾಮೀಣ ಜನರಿಗೆ ಮನವರಿಕೆ ಮಾಡಲು ಘಟಕಗಳನ್ನು ಪ್ರಾರಂಭಿಸಲಾಗುತ್ತಿದ್ದು, ಗ್ರಾಮಗಳನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಜನತೆಗೆ ಅರಿವು ಮೂಡಿಸಲು ಮೊದಲು ಒತ್ತು ನೀಡಲಾಗುತ್ತಿದೆ ಎಂದರು.
ಕಳಸಾಪುರ ಗ್ರಾ.ಪಂ. ಅಧ್ಯಕ್ಷ ಕೆ.ಸಿ.ಚಂದ್ರಶೇಖರ್ ಮಾತನಾಡಿ ಪ್ರತಿ ಮನೆಯಲ್ಲಿ ಕಸ ಹಾಕುವ ಮೊದಲು ಹಸಿ, ಒಣ, ಮರು ಬಳಕೆಯಾಗುವ ಕಸ ಎಂದು ವಿಂಗಡಣೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ಗ್ರಾ.ಪಂ. ಸಿಬ್ಬಂದಿ ಕಸ ಸಾಗಣೆ ವಾಹನಗಳ ಮೂಲಕ ಮನೆಗಳಿಗೆ ತೆರಳಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿ ಸಲಿದ್ದಾರೆ ಎಂದರು.
Kalasapur village of Chikkamagaluru taluk ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧಿಕಾರಿ ಎ.ಡಿ.ಪರಮೇಶ್, ಕಳಸಾಪುರ ಗ್ರಾ.ಪಂ. ಉಪಾಧ್ಯಕ್ಷೆ ಶಿವರತ್ನ, ಸದಸ್ಯರಾದ ರುಕ್ಮಿಣಿ, ಗೌಸ್‌ಖಾನ್, ಕೆ.ಎಸ್.ವೆಂಕಟೇಶ್, ಮಂಜುಳಾ, ಶ್ವೇತಾ, ಕೆ.ಎಸ್.ಶ್ರೀಧರ್, ಕೆ.ಸಿ.ದೇವರಾಜ್, ನಾಗೇಗೌಡ, ಗೌರಮ್ಮ, ಡಿ.ಸಿ.ಯೋಗೀಶ್, ಲಕ್ಷ್ಮಮ್ಮ, ಪಿಡಿಓ ಜಗದೀಶ್ ಮತ್ತಿತರರು ಉಪಸ್ಥಿ ತರಿದ್ದರು.