Monday, December 15, 2025
Monday, December 15, 2025

World Population Day ಜನಸಂಖ್ಯಾ ದುಷ್ಪರಿಣಾಮಗಳ ಬಗ್ಗೆ ಅಲೆಮಾರಿ, ಸ್ಲಂ,ವಲಸಿಗರ ತಾಣಗಳಲ್ಲಿ ಅರಿವು ಮೂಡಿಸಬೇಕು- ಮೇಯರ್ ಶಿವಕುಮಾರ್

Date:

World Population Day ಜನಸಂಖ್ಯೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಎಫ್‍ಪಿಎಐ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರ ಪ್ರಸೂತಿ ಕೇಂದ್ರ, ತುಂಗಾನಗರ ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ/ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದ ದುಷ್ಪರಿಣಾಮಗಳು ಹಾಗೂ ಜನಸಂಖ್ಯೆ ನಿಯಂತ್ರದ ಬಗ್ಗೆ ಅಲೆಮಾರಿ, ಸ್ಲಂ, ವಲಸಿಗರು ವಾಸಿಸುವ ಸ್ಥಳಗಳಲ್ಲಿ ಹೆಚ್ಚು ಅರಿವು ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಜನಸಂಖ್ಯೆ ಹೆಚ್ಚಾದಷ್ಟು ನಮಗೆ ಎಲ್ಲ ಸೌಲಭ್ಯಗಳು ಕಡಿಮೆ ಆಗುತ್ತವೆ. ಅನೇಕ ಸಮಸ್ಯೆಗಳು ಎದುರಾಗುತ್ತವೆ. ಆದದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು ಎಲ್ಲ ಕೇಂದ್ರಗಳಲ್ಲಿ ಜಾಗೃತಿ ಮೂಡಿಸಬೇಕೆಂದರು.

ಉಪ ಮಹಾಪೌರರಾದ ಲಕ್ಷ್ಮೀಶಂಕರ್ ನಾಯ್ಕ್ ಮಾತನಾಡಿ,ಜನಸಂಖ್ಯೆ ನಿಯಂತ್ರಣದ ಕುರಿತು ನಾವು ನಮ್ಮ ಸುತ್ತಮುತ್ತ ಮುಖ್ಯವಾಗಿ ಅಲೆಮಾರಿ, ವಲಸೆ ಬರುವ ಸಮುದಾಯಗಳಿಗೆ ಅರಿವು ಮೂಡಿಸಬೇಕು. ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯವನ್ನು ಇವರಿಗೆ ತಲುಪಿಸಬೇಕೆಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ನಾಗಲೀಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವದ ಜನಸಂಖ್ಯೆಯಲ್ಲಿ ಭಾರತ ನಂ.1 ದೇಶವಾಗಿ ಹೊರಹೊಮ್ಮಿದೆ. ಭಾರತದ ಜನಸಂಖ್ಯೆ 142 ಕೋಟಿ ದಾಟಿದೆ. ರಾಜ್ಯದ ಜನಸಂಖ್ಯೆ 7 ಕೋಟಿ ಸನಿಹದಲ್ಲಿದೆ. ಪ್ರತಿದಿನ 79,726 ಮಕ್ಕಳ ಜನನವಾಗುತ್ತಿದ್ದು, ಪ್ರತಿ ಗಂಟೆಗೆ 3321 ಮಕ್ಕಳ ಹುಟ್ಟು ಆಗುತ್ತಿದೆ. ಈ ರೀತಿಯ ವೇಗದ ಜನಸಂಖ್ಯೆ ಬೆಳವಣಿಗೆ ದೇಶದ ಪ್ರಗತಿಗೆ ಪೂರಕವಲ್ಲ. ಆರೋಗ್ಯವಂತ ಕುಟುಂಬ ಹೊಂದಲು ಸಾಧ್ಯವಾಗುವುದಿಲ್ಲ. ನಿರುದ್ಯೋಗ, ಆಹಾರ, ವಸತಿ, ಆರೋಗ್ಯ ಸಮಸ್ಯೆಗಳು ಹೆಚ್ಚುತ್ತವೆ. ಆದ್ದರಿಂದ ಜನಸಂಖ್ಯೆಗೆ ಕಡಿವಾಣ ಹಾಕಲೇಬೇಕಿದೆ. ರೂಢಿ, ಸಂಪ್ರದಾಯ, ಮೂಢನಂಬಿಕೆ ಇತರೆ ಆಚರಣೆ ಹಂಗನ್ನು ತೊರೆದು ವೈಜ್ಞಾನಿಕ ದೃಷ್ಟಿಕೋನ ಬೆಳೆಸಿಕೊಳ್ಳಬೇಕು.

ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಕುಟುಂಬ ಕಲ್ಯಾಣ ವಿಧಾನಗಳು ಲಭ್ಯವಿದೆ. ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳಾದ ಶಸ್ತ್ರಚಿಕಿತ್ಸೆ, ಗರ್ಭನಿರೋಧಕ ಚುಚ್ಚುಮದ್ದು ಗರ್ಭನಿರೋಧಕ ಮಾತ್ರೆಗಳು ಇತರೆ ನೂತನ ವಿಧಾನಗಳನ್ನು ಅನುಸರಿಸುವ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಬಹುದು. ಹಾಗೂ ತಾಯಿ ಮರಣ ಮತ್ತು ಶಿಶು ಮರಣ ತಗ್ಗಿಸಬಹುದು ಎಂದರು.

ಈ ಬಾರಿಯ ಘೋಷವಾಕ್ಯ ‘ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ದಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೀವೆಂದು ಪ್ರತಿಜ್ಞೆಯನ್ನು ಮಾಡೋಣ’ ಎಂಬುದಾಗಿದ್ದು ಇದಂತೆ ಜನಸಂಖ್ಯೆ ಸ್ಥಿರತೆಯನ್ನು ಕಾಪಾಡಿಕೊಳ್ಳೋಣ.

ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್ ಮಾತನಾಡಿ, ಹಿಂದೆಲ್ಲ ಮನೆಯಲ್ಲಿ ಆರೆಂಟು ಮಕ್ಕಳು ಸಾಮಾನ್ಯವಾಗಿತ್ತು. ಆದರೆ ಜನಸಂಖ್ಯೆ ಸ್ಫೋಟಗೊಳ್ಳುತ್ತಿರುವ ಪ್ರಸ್ತುತ ದಿನಗಳಲ್ಲಿ ಮಕ್ಕಳು ಹೊರೆ ಅನ್ನೋ ಸ್ಥಿತಿ ಎದುರಾಗಿದೆ. ಜೀವನಶೈಲಿ ಬದಲಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಎಲ್ಲವನ್ನು ನೀಡಿ ಅವರನ್ನು ಅತ್ಯಂತ ಜವಾಬ್ದಾರಿ ನೋಡಿಕೊಳ್ಳುವ ಹೊಣೆಗಾರಿಕೆ ಪೋಷಕರಿಗಿದೆ.

ಇಂದಿನ ವೈಜ್ಞಾನಿಕ ಯುಗದಲ್ಲೂ ಹೆಣ್ಣು ಮಗು ಹುಟ್ಟಿದ ನಂತರ ಗಂಡಾಗಲಿ ಎಂದು ಕಾಯುವವರಿದ್ದಾರೆ. ಆದರೆ ಪ್ರಸ್ತುತ ಗಂಡು, ಹೆಣ್ಣು ಎಲ್ಲ ಕ್ಷೇತ್ರಗಳಲ್ಲಿ ಸರಿ ಸಮಾನವಾಗಿದ್ದಾರೆ. ಹೆಣ್ಣೇ ಹೆಚ್ಚು ಸ್ಪಂದನೀಯವಾಗಿದ್ದು, ಹೆಣ್ಣೆಂದು ಹಿಂಜರಿಯವುದನ್ನು ಬಿಡಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಜನಸಂಖ್ಯೆ ನಿಯಂತ್ರಣ ನಮ್ಮೆಲ್ಲರ ಆದ್ಯ ಕರ್ತವ್ಯ. ಜನಸಂಖ್ಯೆ ಹೆಚ್ಚಿದಷ್ಟು ಸಮಸ್ಯೆಗಳು ಹೆಚ್ಚಾಗುತ್ತವೆ. ಮುಖ್ಯವಾಗಿ ಆಹಾರ, ಶಿಕ್ಷಣ, ಆರೋಗ್ಯ ಸಮಸ್ಯೆಗಳು ಹೆಚ್ಚುತ್ತವೆ. ಸಮತೋಲನ ಜೀವನ ನಡೆಸಲು ಜನಸಂಖ್ಯೆ ನಿಯಂತ್ರಣ ಅತ್ಯಗತ್ಯ. ಎಲ್ಲ ಇಲಾಖೆಗಳು ಕೈಜೋಡಿಸಿ ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಟಾನ ಆಗಬೇಕು.

ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಹೆಲ್ತ್ ಆಂಡ್ ನ್ಯುಟ್ರಿಷನ್ ಸರ್ವೇಗೆ ಆರೋಗ್ಯ ಕಾರ್ಯಕರ್ತರು ಬಂದಾಗ ಸಾರ್ವಜನಿಕರು ಸಹಕರಿಸಬೇಕು. ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಸಹಕರಿಸಬೇಕೆಂದರು.

ವಿಶ್ವ ಜನಸಂಖ್ಯಾ ದಿನಾಚರಣೆ/ಅಭಿಯಾನ 2023 ರ ಪ್ರಯುಕ್ತ ತುಂಗಾನಗರದ ನಗರ ಪ್ರಸೂತಿ ಆರೋಗ್ಯ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

World Population Day ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ, ನಗರ ಪ್ರಸೂತಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಭೀಮಪ್ಪ, ಡಾ.ಹರ್ಷವರ್ಧನ್, ಎಫ್‍ಪಿಎ ಪ್ರತಿನಿಧಿ ಪುಷ್ಪಾ ಶೆಟ್ಟಿ, ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡವೀರಪ್ಪ, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...