Sunday, August 9, 2026
Sunday, August 9, 2026

Awareness Educational Loan Scheme ಮತೀಯ ಅಲ್ಪ ಸಂಖ್ಯಾತರಿಂದ ಶೈಕ್ಷಣಿಕ ಸಾಲಕ್ಕೆ ಅರ್ಜಿ ಸ್ವೀಕಾರಕ್ಕೆ ಜುಲೈ 15 ಅಂತಿಮದಿನಾಂಕ

Date:

Awareness Educational Loan Scheme ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಿಂದ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಅರ್ಜಿ ಅವಧಿಯನ್ನು ಜುಲೈ 10 ರವರೆಗೆ ನಿಗದಿಪಡಿಸಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಾದ ಎಂಬಿಬಿಎಸ್, ಬಿಡಿಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗಿಕಲ್ಚರ್ ಸೈನ್ಸ್, ವೆಟರ್ನರಿ, ಅಂಡ್ ಫಾರ್ಮ್ ಸೈನ್ಸ್ ಕೋರ್ಸಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕವನ್ನು ಜು.10 ರಿಂದ ಜು.15 ರವರೆಗೆ ಮುಂದೂಡಲಾಗಿರುತ್ತದೆ.

Awareness Educational Loan Scheme ನಿಗಮದ ವೆಬ್‍ಸೈಟ್ www.kmdconline.karnataka.gov.in ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜು.15 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-228262 ಗೆ ಸಂಪರ್ಕಿಸಬಹುದೆಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...