Sunday, August 2, 2026
Sunday, August 2, 2026

 Shivamogga Chamber of Commerce & Industry ಕೆನಡಾ ಪ್ರವಾಸ ಕೈಗೊಂಡ ಕೈಗಾರಿಕೋದ್ಯಮಿಗೆ ಬೀಳ್ಕೊಡುಗೆ

Date:

Shivamogga Chamber of Commerce & Industry ಕೆನಡಾ ದೇಶದ ಟೊರಂಟೋಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಜಗದೀಶ್ ಮಾತನವರ್ ಜುಲೈ 20 ರಿಂದ ನಾಲ್ಕು ತಿಂಗಳ ಅವಧಿಗೆ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಕೆನಡಾದ ಉದ್ಯಮಿಗಳನ್ನು ಭೇಟಿ ಸಮಾಲೋಚನೆ ನಡೆಸಲಿದ್ದಾರೆ.

ವಿದೇಶಕ್ಕೆ ಪ್ರವಾಸ ಮಾಡುತ್ತಿರುವ ಸಂಘದ ನಿರ್ದೇಶಕ ಜಗದೀಶ್ ಮಾತನವರ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಎನ್.ಗೋಪಿನಾಥ್ ಸೇರಿದಂತೆ ಪದಾಧಿಕಾರಿಗಳು ಶುಭ ಹಾರೈಸಿ ಬಿಳ್ಕೊಟ್ಟರು.

ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಅವಕಾಶ ಇರುವ ಜಿಲ್ಲೆಯಾಗಿದೆ. ಕೆನಡಾ ಪ್ರವಾಸದ ಸಂದರ್ಭದಲ್ಲಿ ಜಗದೀಶ್ ಮಾತನವರ್ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಕೆನಡಾದ ವಾಣಿಜ್ಯ ಉದ್ಯಮಿಗಳೊಂದಿಗೆ ಚರ್ಚಿಸಲಿದ್ದಾರೆ.

Shivamogga Chamber of Commerce & Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಖಜಾಂಚಿ ಎಂ.ರಾಜು, ನಿರ್ದೇಶಕರಾದ ಎಸ್.ಎಸ್.ಉದಯ್‌ಕುಮಾರ್, ಮಧುಸೂದನ್ ಐತಾಳ್, ಬಿ.ಆರ್.ಸಂತೋಷ್, ಪ್ರದೀಪ್ ಯಲಿ, ಇ.ಪರಮೇಶ್ವರ್, ಗಣೇಶ್ ಅಂಗಡಿ, ಬಿ.ಮಂಜೇಗೌಡ, ಮರಿಸ್ವಾಮಿ, ರಮೇಶ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...