Monday, February 2, 2026
Monday, February 2, 2026

HD Thammaiah ಶಾಸಕರ ದಲಿತ ವಿರೋಧಿ ನಡೆ ಬಗ್ಗೆ ಜಿಲ್ಲಾ ದಸಂಸ ಅಸಮಾಧಾನ

Date:

HD Thammaiah ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಮುಖಂಡರುಗಳು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ಸಂಬಂಧಿ ಅಪರ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಅವರಿಗೆ ಬುಧವಾರ ಮನವಿ ಸಲ್ಲಿಸಿದ ದಸಂಸ ಪದಾಧಿಕಾರಿಗಳು ದಲಿತ ಸಮುದಾಯದ ನಗರಸಭಾ ಪೌರಾಯುಕ್ತ ಅಧಿಕಾರಿಯನ್ನು ವರ್ಗಾವಣೆಗೊಳಿಸಿ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್‌ಕುಮಾರ್ ಕಳೆದ ನಾಲ್ಕು ತಿಂಗಳು ನಗರಸಭೆ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಲಿತ ಅಧಿಕಾರಿ ನಗರಸಭೆಯ ಭ್ರಷ್ಟಚಾರವನ್ನು ತಡೆ ಹಿಡಿದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.

ನಗರ ಸಭೆಯಲ್ಲಿ ಈ ಹಿಂದೆ ಆಯುಕ್ತರಾಗಿ ಕಾರ್ಯನಿರ್ವಹಿಸಿದವರು ಅತಿಹೆಚ್ಚು ಭ್ರಷ್ಟಚಾರವೆಸಗಿದ್ದರು. ಅವರ ವಿರುದ್ಧ ಹಲವಾರು ಕೇಸುಗಳು ಲೋಕಾಯುಕ್ತದಲ್ಲಿ ದಾಖಲಾಗಿತ್ತು. ಈ ಬಗ್ಗೆ ಕ್ಷೇತ್ರದ ಶಾಸಕರು ಸ್ವಜಾತೀಯ ಪ್ರೇಮದಿಂದ ಮೌಖಿಕವಾಗಿ ಮನವಿ ಮಾಡಿ ಭ್ರಷ್ಟç ಅಧಿಕಾರಿಯನ್ನು ರಾಜಕೀಯ ಪ್ರಭಾವ ಬಳಸಿ ಮಗದೊಮ್ಮೆ ಆಯುಕ್ತರಾಗಿ ಮಾಡಿರುವುದು ಜನತೆಯ ದುದೈರ್ವ ಎಂದರು.
ಕ್ಷೇತ್ರದ ಶಾಸಕರು ದಲಿತ ಅಧಿಕಾರಿ ಉಮೇಶ್ ಅವರನ್ನು ವರ್ಗಾವಣೆಗೊಳಿಸಿ ಹಿಂದಿನ ಅಧಿಕಾರಿ ಬಸವರಾಜ್ ಅವರಿಗೆ ಆದ್ಯತೆ ನೀಡಿರುವುದು ಸೂಕ್ತವಲ್ಲ. ಇದನ್ನು ಮುಂದಿನ ದಿನಗಳಲ್ಲಿ ದಲಿತ ಸಮುದಾಯ ಪಾಠ ಕಲಿಸದೇ ಬಿಡುವುದಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ದಲಿತರ ಪರ ಎಂದು ಹೇಳುತ್ತಿದೆಯಾದರೂ ಪೌರಾಯುಕ್ತರ ವರ್ಗಾವಣೆಯ ಈ ನಿರ್ಧಾರ ದಲಿತರಿಗೆ ಮಾಡಿದ ಅನ್ಯಾಯವಾಗಿದೆ. ಈ ಬಗ್ಗೆ ಕಾಂಗ್ರೇಸ್ ದಲಿತ ನಾಯಕರು ಹಾಗೂ ಮುಖಂಡರುಗಳು ಧ್ವನಿ ಎತ್ತದಿರುವುದು ವಿಷಾಧನೀಯ ಎಂದು ತಿಳಿಸಿದರು.

HD Thammaiah ಈ ಸಂದರ್ಭದಲ್ಲಿ ದಸಂಸ ಮಹಿಳಾ ಜಿಲ್ಲಾ ಸಂಚಾಲಕಿ ಅರುಣಾಕ್ಷಿ, ಮುಖಂಡರಾದ ದಿಲೀಪ್, ರೇಣುಕ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...