Sunday, December 14, 2025
Sunday, December 14, 2025

Kotak Mahindra Bank on Golden Jubilee Celebrations ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕೊಟಕ್ ಮಹೀಂದ್ರ ಬ್ಯಾಂಕ್, ಶಿವಮೊಗ್ಗ ಶಾಖೆ

Date:

Kotak Mahindra Bank on Golden Jubilee Celebrations ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಸಂಸ್ಥೆಗಳು ಸುದೀರ್ಘ ಅವಧಿ ಸೇವೆ ಒದಗಿಸಲು ಸಾಧ್ಯ. ಕೋಟಕ್ ಸಂಸ್ಥೆಯು ಐವತ್ತು ವರ್ಷಗಳ ಸೇವೆ ಮುಂದುವರೆಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ಉದ್ಯಮಿ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ ಹೇಳಿದರು.

ಶಿವಮೊಗ್ಗ ನಗರದ ಶ್ರೀನಿಧಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ‌ ಇರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಶಾಖೆಯ 50‌ ನೇ ವರ್ಷದ ಸಂಭ್ರಮ ಆಚರಣೆಯ ಕಾರ್ಯಕ್ರಮ‌ ಉದ್ಘಾಟಿಸಿ‌ ಮಾತನಾಡಿದರು.

ಕೋಟಕ್ ಸಂಸ್ಥೆಯು ಶಿವಮೊಗ್ಗ ನಗರದಲ್ಲಿ ಗ್ರಾಹಕರಿಗೆ ಒಳ್ಳೆಯ ಸೇವೆ ನೀಡುತ್ತಿದ್ದು, ಮುಂದಿನ ವರ್ಷಗಳಲ್ಲಿ ಜನರಿಗೆ ಉಪಯುಕ್ತ ಆಗುವಂತೆ ಅಧಿಕ ಸೇವೆಗಳನ್ನು ಒದಗಿಸುವಂತಾಗಲಿ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಶಾಖೆಯು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಮಾತನಾಡಿ, ಬ್ಯಾಂಕ್ ಸದೃಢ ಆಗಿದ್ದರೆ ಸಮಾಜ ಕೂಡ ಆರ್ಥಿಕ ವಾಗಿ ಬಲಿಷ್ಠಗೊಳ್ಳುತ್ತದೆ. ಸಿಬ್ಬಂದಿ ಉತ್ತಮವಾಗಿ ಸ್ಪಂದಿಸುವ ಮನೋಭಾವ ಹೊಂದಿದ್ದಾರೆ. ಬ್ಯಾಂಕ್ ಶಾಖೆಯು ಶತಮಾನ ಆಚರಿಸುವಂತಾಗಲಿ ಎಂದು ತಿಳಿಸಿದರು.

ಕೋಟಕ್ ಮಹೀಂದ್ರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಶಶಿಧರ್.ಎಸ್ ಮಾತನಾಡಿ, ನಮ್ಮ ಶಾಖೆಯು ಐವತ್ತನೇ ವರ್ಷದ ಸಂಭ್ರಮ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಮುಂದೆಯು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತೇವೆ ಎಂದು ತಿಳಿಸಿದರು.

ಕೋಟಕ್ ಬ್ಯಾಂಕ್ ಉದ್ಯೋಗಿಗಳ ಸಂಘದ ಅಧ್ಯಕ್ಷ, ನಿವೃತ್ತ ಉದ್ಯೋಗಿ ವಿ.ನಾಗರಾಜ್ ಸಂಸ್ಥೆ ನಡೆದು ಬಂದ ಹಾದಿ ಹಾಗೂ ಸಂಸ್ಥೆಯ ಸದೃಢವಾಗಿ ಬೆಳೆದ ಬಗ್ಗೆ ವಿವರಿಸಿದರು.

Kotak Mahindra Bank on Golden Jubilee Celebrations ಹಿರಿಯರಾದ ಭೂಪಾಳಂ ವಿಶ್ವೇಂದ್ರ ಅವರು ಐವತ್ತನೇ ವರ್ಷದ ಸಂಭ್ರಮ ಆಚರಣೆಗೆ ಶುಭ ಹಾರೈಸಿದರು. ಕೋಟಕ್ ಮಹೀಂದ್ರಾ ಬ್ಯಾಂಕ್ ಶಾಖೆಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕಿ ಸೌಮ್ಯ ಸಾಕ್ರೆ, ಹನುಮಂತ, ಇನಾಯತ್.ಎನ್.ಎಸ್., ಕಿಶನ್ , ಮಲ್ಲಿಕಾರ್ಜುನ ಕಾನೂರು, ಮತ್ತು ಬ್ಯಾಂಕ್ ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...