Friday, June 13, 2025
Friday, June 13, 2025

Aluru Venkata Rao ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಆಲೂರರದ್ದು ಮಹತ್ತರ ಪಾತ್ರ-ಎಂ.ಬಿ.ನಟರಾಜ್

Date:

Aluru Venkata Rao ಕರ್ನಾಟಕ ಏಕೀಕರಣ ಚಳವಳಿಯ ಮಹತ್ತರ ಪಾತ್ರ ವಹಿಸಿದ್ದ ಆಲೂರು ವೆಂಕಟರಾಯರು ಕರ್ನಾಟಕ ಪುರೋಹಿತ ಎಂದೇ ಪ್ರಸಿದ್ಧರು.

ಕನ್ನಡಿಗರನ್ನು ಜಾಗೃತಗೊಳಿಸಲು ನಿರಂತರವಾಗಿ ವಿವಿಧ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದರು ಎಂದು ಹಿರಿಯ ಸಾಹಿತಿ ಪ್ರೊ. ಎಂ.ಬಿ.ನಟರಾಜ್ ಹೇಳಿದರು.

ಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯ ಸಹಕಾರಿ ನಗರದಲ್ಲಿ ಸಮಾನ ಮನಸ್ಕರ ಬಳಗದ ವತಿಯಿಂದ ಆಯೋಜಿಸಿದ್ದ “ ಆಲೂರು ವೆಂಕಟರಾಯರ ಜನ್ಮದಿನ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಆಲೂರು ವೆಂಕಟರಾಯರು ವ್ಯಕ್ತಿ ಮತ್ತು ಸಾಧನೆ ” ಕುರಿತು ಮಾತನಾಡಿದರು.

ವಕೀಲ ವೃತ್ತಿಯನ್ನು ತೊರೆದು ಸ್ವದೇಶಿ ಚಳವಳಿಯಲ್ಲಿ ಭಾಗವಹಿಸಿದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ವೆಂಕಟರಾರು ಸಾಹಿತ್ಯ, ಬರವಣಿಗೆಯಲ್ಲಿ ತೊಡಗಿಸಿಕೊಂಡಿ ಕೃತಿ ರಚಿಸಿದರು. ವಿವಿಧ ಪತ್ರಿಕೆಗಳಲ್ಲಿ ಸಂಪಾದಕತ್ವ ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಿದರು. ಎರಡು ಬಾರಿ ಗ್ರಂಥಕರ್ತರ ಸಮಾವೇಶ ನಡೆಸಿದರು. ಆಲೂರು ವೆಂಕಟರಾಯರು ಮಾಡಿರುವ ಕಾರ್ಯಗಳನ್ನು ಎಂದಿಗೂ ಮರೆಯುವಂತಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಕರ್ಮಿ ಕಾಂತೇಶ್ ಕದರಮಂಡಲಗಿ ಮಾತನಾಡಿ, ಒಮ್ಮೆ ಆಲೂರು ವೆಂಕಟರಾಯರು, ಕನ್ನಡ ತಾಯಿಗೆ ಈಗ ಬಂದೊದಗಿರುವ ವಿಷಮ ಸ್ಥಿತಿಯಲ್ಲಿ ಯಾರ ಹೃದಯವು ತಲ್ಲಣಿಸುವುದಿಲ್ಲವೋ ಅದು ಹೃದಯವಲ್ಲ, ಕಲ್ಲುಬಂಡೆ ಎಂದಿದ್ದರು. ಆಲೂರು ವೆಂಕಟರಾಯರ ಕೊಡುಗೆ ಅಪಾರ ಎಂದು ಹೇಳಿದರು.

ಸಮಾನ ಮನಸ್ಕರ ಬಳಗದ ವತಿಯಿಂದ ಮುಂದೆಯೂ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಹಿತ್ಯ ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಸಮಾನ ಮನಸ್ಕರ ಬಳಗದ ವತಿಯಿಂದ ಪ್ರವೀಣ ಜವಳಿ ಅವರ ನಿವಾಸದಲ್ಲಿ ಮೊದಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿರಂತರವಾಗಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಬಳಗದ ಸದಸ್ಯರು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

Aluru Venkata Rao ಸಮಾನ ಮನಸ್ಕರ ಬಳಗದ ಸದಸ್ಯರಾದ ಚನ್ನಬಸಪ್ಪ ನ್ಯಾಮತಿ, ಹಸನ್ ಬೆಳ್ಳಿಗನೂಡು, ಪ್ರವೀಣ್ ಜವಳಿ, ಶಿವಕುಮಾರ್.ಎಂ.ಎಲ್., ಅರಳೇಹಳ್ಳಿ ಅಣ್ಣಪ್ಪ, ಸತೀಶ್ ಕುಮಾರ್ ಕೆ., ಪಾಲಾಕ್ಷಪ್ಪ.ಇ., ಎಂ.ಬಿ.ಸಾವಿತ್ರಮ್ಮ, ಬಿ.ನಾಗರಾಜ, ಜಿ.ಎಸ್.ಅನಂತ್, ಶಿವಮೂರ್ತಿ, ಬಿ.ಪಾಲಾಕ್ಷಪ್ಪ, ಬಸವನಗೌಡ, ಅಣ್ಣಪ್ಪ ಒಂಟಿಮಾಳಿಗಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...