Saturday, September 28, 2024
Saturday, September 28, 2024

Breaking News ಆ. 11ಕ್ಕೆ ವಿಮಾನ ಸಂಚಾರಕ್ಕೆ ಏರ್ಪೋರ್ಟ್ ಸಿದ್ದ – ಸಚಿವ ಎಂ. ಬಿ.ಪಾಟೀಲ್

Date:

Breaking News ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅವರು ಹೇಳಿದ್ದಾರೆ.

ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿವರಿಸಿದರು.

ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) ವಹಿಸಲು ಒಪ್ಪಿಗೆ ನೀಡಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ಪಾಟೀಲ್ ಹೇಳಿದರು.

ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ 12 ಲಕ್ಷ ರೂ. ಆದಾಯ ಬಂದಿದೆ ಎಂದರು.

ಆ.11ರಂದು ನಿಲ್ದಾಣ ಕಾರ್ಯಾರಂಭಗೊಳ್ಳುವ ನಿರೀಕ್ಷೆಯಿದ್ದು, ಅಂದು ಶಿವಮೊಗ್ಗದಲ್ಲಿ ನಡೆಯುವ ಸಮಾರಂಭಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಗುತ್ತದೆ. ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಯೋಜನೆಯಂತೆ ನಡೆದರೆ ಆ.11ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದರು.

ಇದೇ ವೇಳೆ ಸಚಿವ ಪಾಟೀಲ್ ಅವರು, ವಿಜಯಪುರ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸಲು ಅಗತ್ಯವಿರುವ ಕೆಲಸಗಳನ್ನು ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ನಿಲ್ದಾಣದ ಮೂಲಯೋಜನೆಯಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯ ಸೇರಿರಲಿಲ್ಲ. ಈಗ ಅದನ್ನು ಸೇರಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಇಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯಕ್ಕೆ ವ್ಯವಸ್ಥೆ ಮಾಡಲು 12 ಕೋಟಿ ರೂ. ಹೆಚ್ಚುವರಿಯಾಗಿ ಬೇಕಾಗುತ್ತದೆ. ಇದುವರೆಗೆ ಸುಮಾರು 350 ಕೋಟಿ ರೂ. ಖರ್ಚಾಗಿದೆ. ರನ್ ವೇ ಪೂರ್ಣಗೊಂಡಿದ್ದು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಕೆಲಸಗಳೆಲ್ಲ ಮುಗಿದಿವೆ. ಕೆಲವು ಉಪಕರಣಗಳ ಅಳವಡಿಕೆ ಮಾತ್ರ ಬಾಕಿ ಇದೆ ಎಂದರು.

ಇಲ್ಲಿ ಕೂಡ ಆಂಬುಲೆನ್ಸ್ ಹಾಗೂ ಇತರೆ ವಾಹನಗಳ ನಿಯೋಜನೆ, ಕಾಫಿ ಕೆಫೆ ಆರಂಭಕ್ಕೆ ವ್ಯವಸ್ಥೆ, ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಸಿ ಮೂರು ತಿಂಗಳ ಅವಧಿಯಲ್ಲಿ ಈ ನಿಲ್ದಾಣವನ್ನು ಕಾರ್ಯಾರಂಭಗೊಳಿಸುವ ಗುರಿ ಇದೆ ಎಂದು ಸಚಿವರು ವಿವರಿಸಿದರು.

ನಿರ್ಮಾಣ ಹಂತದಲ್ಲಿರುವ ಹಾಸನ, ರಾಯಚೂರು ಮತ್ತು ಕಾರವಾರ ವಿಮಾನ ನಿಲ್ದಾಣಗಳ ಕಾರ್ಯ ಪ್ರಗತಿ ಪರಿಶೀಲಿಸಿದರು. ರಾಜ್ಯ ಬಜೆಟ್ ನಲ್ಲಿ ಘೋಷಣೆಗೊಂಡ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರು ಏರ್ ಸ್ಟ್ರಿಪ್ ಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆಯೂ ಚರ್ಚೆ ನಡೆಸಿದರು.

Breaking News Shivamogga Airport ಕೆಎಸ್ಐಐಡಿಸಿ ವ್ಮವಸ್ಥಾಪಕ ನಿರ್ದೇಶಕ ರವಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...