Monday, February 2, 2026
Monday, February 2, 2026

M. B. Patil ಔರಾದ್ ನಲ್ಲಿ ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ & ಟೆಕ್ನಾಲಜಿ ಸಂಸ್ಥೆ ಕಟ್ಟಡ ಕಾಮಗಾರಿ ಉದ್ಘಾಟನೆ

Date:

M. B. Patil ಬೀದರ್ ಜಿಲ್ಲೆಯಲ್ಲಿ ಸಿಪೆಟ್ (ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ) ಕೇಂದ್ರದ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಕೇಂದ್ರ ಸರ್ಕಾರದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾಗಿರುವ ಭಗವಂತ ಖೂಬಾ ಹಾಗೂ ಭಾರಿ & ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಬುಧವಾರ ಸಮಾಲೋಚನೆ ನಡೆಸಿದರು.

ಕೇಂದ್ರ ಸಚಿವ ಖೂಬಾ ಅವರು ಸಚಿವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ಸಿಪೆಟ್ ಕೇಂದ್ರದ ಸ್ಥಾಪನೆಗಾಗಿ ಜಿಲ್ಲಾಡಳಿತವು ಬೀದರ್ ಜಿಲ್ಲೆ ಔರಾದ ತಾಲ್ಲೂಕಿನ ಬಲ್ಲೂರ ಹತ್ತಿರ 10 ಎಕರೆ ಜಾಗವನ್ನು ಈಗಾಗಲೇ ಗುರುತಿಸಿದೆ. ಅಲ್ಲದೇ, ಕಳೆದ ವರ್ಷ ಇದರ ಭೂಮಿಪೂಜೆಯೂ ನಡೆದಿದೆ ಎಂದರು.

ಮಂಜೂರಾಗಿರುವ ಸಿಪೆಟ್ ಕಟ್ಟಡಕ್ಕಾಗಿ ಕೇಂದ್ರ ಸರ್ಕಾರ ತನ್ನ ಪಾಲಿನ ಶೇಕಡ 50ರಷ್ಟು ಅನುದಾನವನ್ನು ಕೊಟ್ಟಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಶೇಕಡ 50ರಷ್ಟು ಹಣ ನೀಡಿ ಕಟ್ಟಡ ಕಾಮಗಾರಿಗೆ ಚಾಲನೆ ಕೊಡಬೇಕು ಎಂದರು.

ಇದೇ ಸಂದರ್ಭದಲ್ಲಿ ಖೂಬಾ ಅವರು ಬೀದರ್ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ಕೋರಿದರು.

ಜಿಲ್ಲೆಯಲ್ಲಿ ಉದ್ದಿಮೆಗಳ ಸ್ಥಾಪನೆಗೆ ಹೂಡಿಕೆ ಮಾಡಲು ಕೆಲವರು ಈ ಹಿಂದೆ ಆಸಕ್ತಿ ತೋರಿದ್ದರು. ಆದರೆ ಕೋವಿಡ್ ನಿಂದಾಗಿ ಅದಕ್ಕೆ ಹಿನ್ನಡೆಯಾಗಿತ್ತು. ಈಗ ಪುನಃ ಆಸಕ್ತರನ್ನು ಜಿಲ್ಲೆಯಲ್ಲಿ ಉದ್ಯಮಿಗಳ ಸ್ಥಾಪನೆಗೆ ಆಹ್ವಾನಿಸಬೇಕು ಎಂದು ಅಭಿಪ್ರಾಯಪಟ್ಟರು.

M. B. Patil ಬೀದರ್ ಭಾಗದ ಜನ ಉದ್ಯೋಗ ಹುಡುಕಿಕೊಂಡು ತೆಲಂಗಾಣ ಮತ್ತು ಮಹಾರಾಷ್ಟ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿಯೇ ಉದ್ದಿಮೆಗಳು ಸ್ಥಾಪನೆಯಾದರೆ ಈ ವಲಸೆಗೆ ತಡೆ ಬೀಳುತ್ತದೆ ಎಂದು ವಿವರಿಸಿದರು.

ಶಾಸಕರಾದ ಶೈಲೇಂದ್ರ ಬೆಲ್ದಾಳೆ ಮತ್ತು ಸಿದ್ದು ಪಾಟೀಲ್ ಅವರು ಈ ಸಂದರ್ಭದಲ್ಲಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...