Application Invitation for Agriculturist Award ಕೃಷಿ ಇಲಾಖೆಯು 2023-24 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿ ಮತ್ತು ಬೆಳೆ ವೈವಿದ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರ ಯಾವುದೇ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರಬೇಕು.
ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಹಾಗೂ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನಿಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು/ಕುರಿ/ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.]
ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 24 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Application Invitation for Agriculturist Award ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.