Municipal Corporation ಚಿಕ್ಕಮಗಳೂರು ನಗರದ ಬಸ್‌ನಿಲ್ದಾಣದ ಒಳಾಂಗಣ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 10ಕೆಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡರು.
ಬಳಿಕ ಮಾತನಾಡಿದ ಆಯುಕ್ತ ಬಿ.ಸಿ.ಬಸವರಾಜ್ ಪ್ಲಾಸ್ಟಿಕ್ ನಿಷೇಧ ಸಂಬಂಧ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಕೆಲವು ಅಂಗಡಿಮುಂಗಟ್ಟುಗಳು ಅನಧಿಕೃತವಾಗಿ ಬಳಕೆ ಮಾಡುತ್ತಿದ್ದಾರೆ. ಇದರಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದರು.
ಪ್ಲಾಸ್ಟಿಕ ನಿಷೇಧಿಸುವ ಸಲುವಾಗಿ ನಗರದ ಪ್ರಮುಖ ಅಂಗಡಿಗಳಲ್ಲಿ ಈಗಾಗಲೇ ಹಲವಾರು ಬಾರಿ ಶಿಸ್ತು ಕ್ರಮ ಕೈಗೊಂಡಿದೆ. ಈ ನಡುವೆ ನಗರದ ಪ್ರಮುಖ ಹೃದಯಭಾಗವಾದ ಬಸ್‌ಸ್ಟ್ಯಾಂಡ್‌ನಲ್ಲೇ ಪ್ಲಾಸ್ಟಿಕ್ ಬಳಕೆ ಮಾಡಿರು ವುದು ಸರಿಯಲ್ಲ ಎಂದು ತಿಳಿಸಿದರು.
Municipal Corporation ಈ ಬಾರಿ ಮಾನವೀಯತೆಯ ನೆಲೆಗಟ್ಟಿನಲ್ಲಿ ಕ್ಷಮಿಸಿ ಅಂಗಡಿದಾರರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ಪ್ಲಾಸ್ಟಿಕ್ ಬಳಕೆಗೆ ಮುಂದಾದಲ್ಲಿ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸ್ವಚ್ಚತಾ ಮೇಲ್ವಿಚಾರಕರಾದ ಅಣ್ಣಯ್ಯ, ವಿವೇಕ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಎಸ್. ಈಶ್ವರ್, ಕಿರಿಯ ಆರೋಗ್ಯ ನಿರೀಕ್ಷಕರಾದ ಶಶಿರಾಜ್, ವೆಂಕಟೇಶ್ ಮತ್ತಿತರರು ಹಾಜರಿದ್ದರು.