Thursday, June 25, 2026
Thursday, June 25, 2026

Municipal Corporation ಬಸ್ ನಿಲ್ದಾಣದೊಳಗಿನ ಮಳಿಗೆಗಳ ಮೇಲೆ ದಾಳಿ: 10 ಕೆಜಿ ನಿಷೇಧಿತ ಪ್ಲಾಸ್ಟಿಕ್ ಪತ್ತೆ

Date:

Municipal Corporation ಚಿಕ್ಕಮಗಳೂರು ನಗರದ ಬಸ್‌ನಿಲ್ದಾಣದ ಒಳಾಂಗಣ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 10ಕೆಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡರು.

ಬಳಿಕ ಮಾತನಾಡಿದ ಆಯುಕ್ತ ಬಿ.ಸಿ.ಬಸವರಾಜ್ ಪ್ಲಾಸ್ಟಿಕ್ ನಿಷೇಧ ಸಂಬಂಧ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಕೆಲವು ಅಂಗಡಿಮುಂಗಟ್ಟುಗಳು ಅನಧಿಕೃತವಾಗಿ ಬಳಕೆ ಮಾಡುತ್ತಿದ್ದಾರೆ. ಇದರಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದರು.

ಪ್ಲಾಸ್ಟಿಕ ನಿಷೇಧಿಸುವ ಸಲುವಾಗಿ ನಗರದ ಪ್ರಮುಖ ಅಂಗಡಿಗಳಲ್ಲಿ ಈಗಾಗಲೇ ಹಲವಾರು ಬಾರಿ ಶಿಸ್ತು ಕ್ರಮ ಕೈಗೊಂಡಿದೆ. ಈ ನಡುವೆ ನಗರದ ಪ್ರಮುಖ ಹೃದಯಭಾಗವಾದ ಬಸ್‌ಸ್ಟ್ಯಾಂಡ್‌ನಲ್ಲೇ ಪ್ಲಾಸ್ಟಿಕ್ ಬಳಕೆ ಮಾಡಿರು ವುದು ಸರಿಯಲ್ಲ ಎಂದು ತಿಳಿಸಿದರು.

Municipal Corporation ಈ ಬಾರಿ ಮಾನವೀಯತೆಯ ನೆಲೆಗಟ್ಟಿನಲ್ಲಿ ಕ್ಷಮಿಸಿ ಅಂಗಡಿದಾರರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ಪ್ಲಾಸ್ಟಿಕ್ ಬಳಕೆಗೆ ಮುಂದಾದಲ್ಲಿ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸ್ವಚ್ಚತಾ ಮೇಲ್ವಿಚಾರಕರಾದ ಅಣ್ಣಯ್ಯ, ವಿವೇಕ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಎಸ್. ಈಶ್ವರ್, ಕಿರಿಯ ಆರೋಗ್ಯ ನಿರೀಕ್ಷಕರಾದ ಶಶಿರಾಜ್, ವೆಂಕಟೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...