Thursday, November 21, 2024
Thursday, November 21, 2024

Dr. Selvamani ಶಿವಮೊಗ್ಗ ಜಿಲ್ಲೆ ಯಲ್ಲಿ ನೂರಾರು ಪ್ರವಾಸಿ ತಾಣಗಳಿವೆ.ಪರಿಚಯದ ಮೂಲಕ ಅಭಿವೃದ್ದಿ ಸಾಧ್ಯ- ಡಾ.ಸೆಲ್ವಮಣಿ

Date:

Dr. Selvamani ಶಿವಮೊಗ್ಗ: ಪ್ರವಾಸಿ ತಾಣಗಳ ಕುರಿತು ಪರಿಚಯಿಸುವ ಹಾಗೂ ಅನ್ವೇಷಣೆ ಮಾಡುವ ಪ್ರವೃತ್ತಿ ರಾಜ್ಯದಲ್ಲಿ ಕಡಿಮೆ. ಆದ್ದರಿಂದ ರಾಜ್ಯದ ಬಹುತೇಕ ಪ್ರವಾಸಿ ಸ್ಥಳಗಳ ಬಗ್ಗೆ ಜನರಿಗೆ ತಿಳಿದಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಪ್ರವಾಸೋದ್ಯಮ ಹಾಗೂ ಪೂರಕ ಅಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಪ್ರವಾಸಿ ತಾಣಗಳಿದ್ದು, ಪ್ರತಿಯೊಂದು ಜಿಲ್ಲೆಯಲ್ಲಿಯೂ ಐವತ್ತಕ್ಕೂ ಅಧಿಕ ಪ್ರವಾಸಿ ಕ್ಷೇತ್ರಗಳಿವೆ. ಪರಿಸರ, ಐತಿಹಾಸಿಕ, ಧಾರ್ಮಿಕ ಸೇರಿದಂತೆ ಆಕರ್ಷಣೆಯ ಪ್ರವಾಸ ಸ್ಥಳಗಳನ್ನು ಪರಿಚಯಿಸುವ ಹಾಗೂ‌ ಅನ್ವೇಷಿಸುವ ಕಾರ್ಯ ಆಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ನೂರಾರು ಪ್ರವಾಸಿ ಕ್ಷೇತ್ರಗಳಿವೆ. ಪರಿಚಯಿಸುವ ಕೆಲಸ ಮಾಡುವುದರಿಂದ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮದ ಸುಸ್ಥಿರ ಅಭಿವೃದ್ಧಿ ಆಗಬೇಕು. ಪ್ರವಾಸಿ ಸ್ಥಳಗಳಲ್ಲಿ ಮೂಲ ಸೌಕರ್ಯ, ಸುರಕ್ಷತೆಗೆ ಹೆಚ್ಚಿನ ಕ್ರಮ ವಹಿಸಬೇಕು. ಕೃಷಿ ಪ್ರವಾಸೋದ್ಯಮದ ಪ್ರಾಮುಖ್ಯತೆ ಅರಿವು‌ ಮಾಡಿಸಬೇಕು. ಪ್ರವಾಸೋದ್ಯಮದಲ್ಲಿ ಇರುವ ಉದ್ಯೋಗ ಸಾಧ್ಯತೆಗಳ ಬಗ್ಗೆ ಹೆಚ್ಚಿನ ಜಾಗೃತಿ ಆಗಬೇಕು ಎಂದರು.

ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಪ್ರಾಚಾರ್ಯೆ ಡಾ. ಎಂ.ಕೆ.ವೀಣಾ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ನಾಶ ಆಗುತ್ತಿದ್ದು, ಪರಿಸರ ಹಾನಿಯಾಗುವುದನ್ನು ತಪ್ಪಿಸಬೇಕು. ಪರಿಸರ ಸಂರಕ್ಷಣೆ ಜತೆಯಲ್ಲಿ ಪ್ರವಾಸೋದ್ಯಮ ಪೂರಕ ಅಭಿವೃದ್ಧಿ ಆಗಬೇಕು. ನೈಸರ್ಗಿಕವಾಗಿ ಇರುವ ಪ್ರವಾಸಿ ಸ್ಥಳಗಳ ಗುರುತಿಸುವ ಕೆಲಸ‌‌ ಆಗಬೇಕು. ಪಾರಂಪರಿಕ ಚಟುವಟಿಕೆಗಳ ಕುರಿತಾಗಿರುವ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಪ್ರವಾಸ ಎನ್ನುವುದು ಕೇವಲ ಮನರಂಜನೆಯಲ್ಲ. ಪ್ರವಾಸವು ಸಾಹಸಿ ಹಾಗೂ ಜ್ಞಾನಾರ್ಜನೆಯ ಮಾರ್ಗ. ಶಿವಮೊಗ್ಗ ಜಿಲ್ಲೆಯ ಪ್ರವಾಸ ಸ್ಥಳಗಳನ್ನು ಹೆಚ್ಚು ಹೆಚ್ಚು ಪರಿಚಯಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯು ಪ್ರಾಕೃತಿಕವಾಗಿ ಸಂಪನ್ಮೂಲ ಹೊಂದಿದ್ದು, ಪ್ರವಾಸೋದ್ಯಮ ಕ್ಕೆ ಪೂರಕ ಅವಕಾಗಳಿವೆ. ಹೊಸ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸುವ ಅಗತ್ಯವಿದೆ ಎಂದು ಹೇಳಿದರು.

ಪ್ರವಾಸಿ ಯುವಜನರ ತಂಡವನ್ನು ಕಾಲೇಜು ವಿದ್ಯಾರ್ಥಿಗಳು ರಚಿಸಿಕೊಂಡು ಶಿವಮೊಗ್ಗ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ವಿಡಿಯೋ ಚಿತ್ರಿಕರೀಸಿ ಸೋಷಿಯಲ್ ಮಿಡಿಯಾದ ತಾಣಗಳಲ್ಲಿ ದಾಖಲಿಸಬೇಕು. ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ವಿಶ್ವದ ಎಲ್ಲರಿಗೂ ವಿಷಯ ತಲುಪಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಸಾಧ್ಯತೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ತಿಳಿಸಿದರು.

ಪತ್ರಕರ್ತ ರಾಮಚಂದ್ರ ಗುಣಾರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಆವಿನ್.ಆರ್., ಅಜಯ್ ಕುಮಾರ್ ಶರ್ಮಾ, ಸವಿತಾ ಮಾಧವ್ ಅವರು‌ ವಿಶೇಷ ಉಪನ್ಯಾಸ ನೀಡಿದರು.

Dr. Selvamani ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್, ಬಿ.ಗೋಪಿನಾಥ್, ಪ್ರದೀಪ್ ಯಲಿ, ಇ.ಪರಮೇಶ್ವರ್, ಗಣೇಶ್ ಅಂಗಡಿ, ರಮೇಶ್ ಹೆಗೆಡೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...