Monday, February 2, 2026
Monday, February 2, 2026

Poor Road Work ಚಿಕ್ಕಮಗಳೂರಿನ ಎಂ.ಜಿ.ರಸ್ತೆ ಕಳಪೆ ಕಾಮಗಾರಿ:ಕಾನೂನು ಕ್ರಮಕ್ಕೆ ಆಗ್ರಹ

Date:

Poor Road Work ಚಿಕ್ಕಮಗಳೂರು, ನಗರದ ಎಂ.ಜಿ.ರಸ್ತೆಯ ದುರಸ್ಥಿ ಕಾಮಗಾರಿಯು ಕಳಪೆಯಾಗಿರುವ ಪರಿಣಾಮ ಗುತ್ತಿಗೆದಾರ ಹಾಗೂ ಹಣ ಬಿಡುಗಡೆ ಮಾಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ನಗರಸಭಾ ಮಾಜಿ ಅಧ್ಯಕ್ಷ ಸಯ್ಯದ್ ಜಮೀಲ್ ಅಹ್ಮದ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬoಧ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಗುರುವಾರ ಮನವಿ ಸಲ್ಲಿಸಿ ಮಾತನಾಡಿದ ಅವರು ಇತ್ತೀಚೆಗೆ ಎಂ.ಜಿ.ರಸ್ತೆಯ ದುರಸ್ಥಿ ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ಈ ಬಗ್ಗೆ ಲೋಕಾಯುಕ್ತ ನ್ಯಾಯಾ ಲಯದಲ್ಲಿ ದಾವೆಯನ್ನು ದಾಖಲಿಸಲಾಗಿದೆ ಎಂದರು.

ಈ ನಡುವೆ ಪ್ರಕರಣವು ನ್ಯಾಯಾಲಯದಲ್ಲಿ ಇರುವಾಗಲೇ ಪುನಃ ಎಂ.ಜಿ.ರಸ್ತೆಗೆ 37 ಲಕ್ಷ ಹಣ ಬಿಡುಗಡೆ ಮಾಡಿ ಕಳಪೆ ಕಾಮಗಾರಿಯನ್ನು ನಡೆಸಿರುತ್ತಾರೆ. ಇದರಿಂದ ರಸ್ತೆಯಲ್ಲೆಲ್ಲಾ ಮಳೆಯ ನೀರು ತುಂಬಿಕೊ0ಡು ಸಾರ್ವಜನಿಕರಿಗೆ ಓಡಾಡದಂತಹ ಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಆದ್ದರಿಂದ ಕಾಮಗಾರಿ ಕಳಪೆವೆಸಗಿರುವ ಗುತ್ತಿಗೆದಾರ ಹಾಗೂ ಹಣ ಬಿಡುಗಡೆಗೊಳಿಸಿರುವ ಅಧಿಕಾರಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಹಣವನ್ನು ಪೋಲು ಮಾಡುವುದನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

Poor Road Work ಈ ಸಂದರ್ಭದಲ್ಲಿ ಎಎಪಿ ಮುಖಂಡ ಈರೇಗೌಡ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...