Loan to Farmers ರಾಜ್ಯದ ಕೃಷಿಕರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲವನ್ನು ರೂ.3 ಲಕ್ಷ ಮಿತಿಯಿಂದ ರೂ. 5 ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರದಲ್ಲಿ ಯೋಜನೆಯ ಅನುಷ್ಠಾನಗೊಳಿಸಲಾಗುವುದು ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಾವಣಗೆರೆ, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನದಲ್ಲಿರುವ ಕೃಷಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಬಾರಿ ವಾಡಿಕೆಯಷ್ಟು ಮುಂಗಾರು ಮಳೆ ಬಿದ್ದಿಲ್ಲ. ಕೃಷಿ ಅಧಿಕಾರಿಗಳು ಕಾಲ ಕಾಲಕ್ಕೆ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಗ್ರಾಮೀಣ ಭಾಗದಲ್ಲಿ ಕ್ಷೇತ್ರ ಭೇಟಿಗೆ ತೆರಳಿದಾಗ ಅಲ್ಲಿನ ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು. ಅದಕ್ಕೆ ಪೂರಕವಾಗಿ ಸೂಕ್ತ ಹಾಗೂ ಸಕಾಲಿಕ ಮಾರ್ಗದರ್ಶನ ನೀಡಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದರು.
Loan to Farmers ಮುಂದಿನ 15 ದಿನದೊಳಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.