Friday, April 18, 2025
Friday, April 18, 2025

Mallikarjuna Kharge ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ 81 ನೇ ಹುಟ್ಟುಹಬ್ಬ

Date:

Mallikarjuna Kharge ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ 81ನೇ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರುಗಳು ಚಿಕ್ಕಮಗಳೂರು ನಗರದ ಹೆರಿಗೆ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆಯರಿಗೆ ಹಣ್ಣು ವಿತರಿಸುವ ಮೂಲಕ ಶುಕ್ರವಾರ ಆಚರಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಕಿಸಾನ್ ಸೆಲ್ ರಾಜ್ಯ ಕಾರ್ಯದರ್ಶಿ ಸಿ.ಎನ್.ಅಕ್ಮಲ್ ವೈಯಕ್ತಿಕ ಜೀವನ ಮತ್ತು ರಾಜಕೀಯ ಬದುಕಿನಲ್ಲಿ ಮಹತ್ವದ ಮೈಲುಗಲ್ಲು ಸ್ಥಾಪಿಸಿದವರು ಮಲ್ಲಿಕಾರ್ಜುನ ಖರ್ಗೆಯವರು. ತಮ್ಮ ಅನುಕರಣೀಯ ಸಾರ್ವಜನಿಕ ಸೇವೆ, ಸುದೀರ್ಘ ರಾಜಕೀಯ ಜೀವನಾನುಭವ ಎಲ್ಲ ಪೀಳಿಗೆಗೂ ಅಗತ್ಯವಾಗಿದೆ ಎಂದರು.

ಪ್ರಸ್ತುತ ಕರ್ನಾಟಕದಲ್ಲಿ ಅಧಿಕಾರ ದೊರಕಿದ ಮಾದರಿಯಲ್ಲೇ ಇಡೀ ದೇಶದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಲು ಮಲ್ಲಿಕಾರ್ಜುನ ಖರ್ಗೆಯವರ ಸೂಕ್ತ ಮಾರ್ಗದರ್ಶನ ಅವಶ್ಯಕತೆಯಿದೆ. ಆ ನಿಟ್ಟಿನಲ್ಲಿ ದೇವರು ಇನ್ನಷ್ಟು ಆರೋಗ್ಯವನ್ನು ನೀಡುವ ಮೂಲಕ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವ0ತಾಗಲಿ ಎಂದು ಶುಭ ಹಾರೈಸಿದರು.

Mallikarjuna Kharge ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಸೈಯ್ಯದ್ ಜಬೀ, ರಿಜ್ವಾನ್, ಬಾಬರ್, ಸೈಯ್ಯದ್ ಸಾದಿಕ್, ಮಜ್ಸರ್, ಸಫೀ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...