Karnataka Ranks Third in Filing Cases of Missing Children ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 2.75 ಲಕ್ಷಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ.
ಸಂಸದ ಬಿಜೇಂದ್ರ ಸಿಂಗ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 27,528 ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ 8,635 ಬಾಲಕರು ಹಾಗೂ 18, 893 ಬಾಲಕಿಯರು ಕಾಣೆಯಾಗಿದ್ದಾರೆ. ಇದೇ ಸಮಯದಲ್ಲಿ 7,163 ಬಾಲಕರು, 14,649 ಬಾಲಕಿಯರು ಸೇರಿದಂತೆ ಒಟ್ಟು 21,817 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
Karnataka Ranks Third in Filing Cases of Missing Children ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಟ್ರ್ಯಾಕ್ ಚೈಲ್ಡ್ ಪೋರ್ಟಲ್ ಅಭಿವೃದ್ಧಿಪಡಿಸಿದೆ. ಇದು ಕಾಣೆಯಾದ ಮಕ್ಕಳನ್ನ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.