Kateel Ashok Pai Memorial College ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮೌಲ್ಯಾಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಬಹಳ ಪ್ರಮುಖವಾಗಿದ್ದು ಅಂತಹ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿಮಾರ್ಣ ಸಾಧ್ಯವಾಗುತ್ತದೆ, ಮಕ್ಕಳಿಗೆ ಜೀವನ ಕೌಶಲ್ಯ ಕಲಿಸುವುದರಿಂದ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿಮಾರ್ಣವಾಗತ್ತದೆ ಎಂದು ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ, ಜೆ.ಪಿ.ಎನ್ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಅಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಹಾಗೂ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಶ್ರೀ ಎ.ಎನ್.ರಾಮಚಂದ್ರ ಭಾಗವಹಿಸಿ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಆರಿತುಕೊಳ್ಳಬೇಕು, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಶ್ರೀ ರಂಗಪ್ಪ ಭಾಗವಹಿಸಿದ್ದರು
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಮೂಲಕ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ.ಪಿ.ಎನ್ ಕಾಲೇಜಿನ ಪ್ರಾಚಾರ್ಯರ ಕೆ. ಕೆಂಚಪ್ಪ ವಹಿಸಿಕೊಂಡಿದ್ದರು.
Kateel Ashok Pai Memorial College ಕಾರ್ಯಕ್ರಮದಲ್ಲಿ ಶ್ರೀ ದಯಾನಂದ ನಾಯ್ಕ, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿ ವೃಂದ ಮತ್ತಿತರು ಭಾಗವಹಿಸಿದ್ದರು.