Friday, December 5, 2025
Friday, December 5, 2025

Rotary Club Shivamogga ಹೊಸ ಆಲೋಚನೆ,ಸಲಹೆಮತ್ತು ಮಾರ್ಗದರ್ಶನದಿಂದ ರೋಟರಿ ಪರಿಣಾಮಕಾರಿ- ಸತೀಶ್ಚಂದ್ರ

Date:

Rotary Club Shivamogga ರೋಟರಿ ಸಂಸ್ಥೆಯು ಸೇವಾ ಚಟುವಟಿಕೆ ನಡೆಸುವ ಅಂತರಾಷ್ಟ್ರೀಯ ಸಂಘಟನೆಯಾಗಿದೆ. ಹೊಸ ಸದಸ್ಯರ ಸೇರ್ಪಡೆಯಿಂದ ಸಂಘಟನೆ ಶಕ್ತಿ ವೃದ್ಧಿಸುತ್ತದೆ. ಸಂಘ ಸಂಸ್ಥೆಗಳಿಗೆ ಹೊಸ ಸದಸ್ಯರು ಸೇರ್ಪಡೆ ಆಗುವುದರಿಂದ ಸಂಸ್ಥೆಯು ಬಲಿಷ್ಠವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಶಿವಮೊಗ್ಗ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಹಾಗೂ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾಜಿಕ ಸೇವೆಯ ಆಶಯದಿಂದ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗೆ ಹೆಚ್ಚು ಸದಸ್ಯರು ಸೇರ್ಪಡೆಯಾದಷ್ಟು ಹೆಚ್ಚಿನ ಸೇವಾ ಕಾರ್ಯಗಳನ್ನು ನಡೆಸಲು ಸಾಧ್ಯವಿದೆ. ಹೊಸ ಆಲೋಚನೆ, ಸಲಹೆ, ಸಹಕಾರ ಹಾಗೂ ಮಾರ್ಗದರ್ಶನದಿಂದ ಸಂಸ್ಥೆಯು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಿದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಸೇವಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಅನುಷ್ಠಾನ ಮಾಡುತ್ತಿದ್ದು, ಅಗತ್ಯವಿರುವವರಿಗೆ ಸೇವೆಯನ್ನು ತಲುಪಿಸುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಕೆಲಸಗಳನ್ನು ಮಾಡುತ್ತಿದೆ. ಆರೋಗ್ಯ ಶಿಬಿರ, ಜಾಗೃತಿ ಶಿಬಿರಗಳನ್ನು ಕೈಗೊಳ್ಳುತ್ತಿದೆ ಎಂದರು.

Rotary Club Shivamogga ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಡಾ. ಮಹಾದೇವಸ್ವಾಮಿ, ದಿವ್ಯಾ ಪ್ರವೀಣ್, ಡಾ. ಧನಂಜಯ, ಪ್ರಜ್ವಲ್ ಜೈನ್, ಉಮಾಮಣಿ, ಪ್ರಕಾಶ್, ಪ್ರಜ್ವಲ್ ಅವರು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಸೇರ್ಪಡೆಗೊಂಡರು.
ಇದೇ ಸಂದರ್ಭದಲ್ಲಿ ಹೊಸ ಸದಸ್ಯರಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ವಸಂತ್ ಹೋಬಳಿದಾರ್, ಡಾ. ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರಕುಮಾರ್, ಕೆ.ಜಿ.ರಾಮಚಂದ್ರರಾವ್, ಚಂದ್ರಶೇಖರಯ್ಯ, ಡಾ. ಪರಮೇಶ್ವರ್, ಗಣೇಶ್, ಮಂಜುನಾಥ್ ಕದಂ, ನಾಗವೇಣಿ, ಮಂಜುನಾಥ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...