Monday, December 15, 2025
Monday, December 15, 2025

Dept of Heavy Industries Govt of Karnataka ಬೆಂಗಳೂರು ಉಪನಗರ ರೈಲು ಯೋಜನೆ ವಿಸ್ತರಣೆ: ಸಾಧ್ಯತಾ ವರದಿಗೆ ಪತ್ರ- ಸಚಿವ ಎಂ.ಬಿ.ಪಾಟೀಲ್

Date:

Dept of Heavy Industries Govt of Karnataka ರಾಜಧಾನಿಯಲ್ಲಿನ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಾಗಡಿ, ಗೌರಿಬಿದನೂರು, ಬಂಗಾರಪೇಟೆಗೆ ವಿಸ್ತರಿಸುವ ಆಸಕ್ತಿ ಇದ್ದು, ಈ ಬಗ್ಗೆ ಕಾರ್ಯಸಾಧ್ಯತಾ ವರದಿ ಮಾಡಿಕೊಡಬೇಕೆಂದು ಕೋರಿ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಉಪನಗರ ರೈಲು ಯೋಜನೆಯ ಪ್ರಗತಿ ಕುರಿತು ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದ (ಕೆ-ರೈಡ್‌) ಉನ್ನತ ಅಧಿಕಾರಿಗಳೊಂದಿಗೆ ಅವರು ಪರಿಶೀಲನಾ ಸಭೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, “ಹಂತ-1ರಲ್ಲಿ ಉಪನಗರ ರೈಲು ಯೋಜನೆ ಕಾಮಗಾರಿ (148.17 ಕಿ.ಮೀ.) ನಡೆಯುತ್ತಿದೆ. ಇದನ್ನು ಸುತ್ತಲಿನ ಹಲವು ನಗರಗಳಿಗೆ ವಿಸ್ತರಿಸುವ ಅಗತ್ಯವಿದೆ. ಈ ಸಂಬಂಧ ಜೂನ್‌ 6ರಂದು ಸಭೆ ನಡೆಸಲಾಗಿತ್ತು. ಕೆ-ರೈಡ್‌ ಈ ಪ್ರಸ್ತಾವನೆಗೆ ಅಂದು ತಾತ್ತ್ವಿಕ ಒಪ್ಪಿಗೆ ನೀಡಿತ್ತು. ಮುಂದಿನ ಹೆಜ್ಜೆಯಾಗಿ ಈಗ ನೈರುತ್ಯ ರೈಲ್ವೆಗೆ ಪತ್ರ ಬರೆಯಲಾಗಿದೆ” ಎಂದರು.

ಉಪನಗರ ರೈಲು ಯೋಜನೆಯ ಹಂತ-1ರ ಕಾಮಗಾರಿಗಳು ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿವೆ. ಆದರೆ, ಹಂತ-2ನ್ನು 452 ಕಿ.ಮೀ.ಗಳಿಗೆ ವಿಸ್ತರಿಸಲು ಯೋಚಿಸಿದ್ದು, ಇದಕ್ಕೆ ಈಗಿನಿಂದಲೇ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳುವ ಜರೂರಿದೆ.

ನಿಯಮಗಳ ಪ್ರಕಾರ ರಾಜ್ಯ ಸರಕಾರದ ಸಂಸ್ಥೆಯು ಕಾರ್ಯಸಾಧ್ಯತಾ ವರದಿ ತಯಾರಿಸಲು ಸಾಧ್ಯವಿಲ್ಲ. ಇದನ್ನು ರೈಲ್ವೆ ಮಂಡಲಿಯೇ ಮಾಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಅವರು, ಉಪನಗರ ರೈಲು ಯೋಜನೆಯ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು. ರೈಲು ವ್ಯವಸ್ಥೆಗೆ ಬೇಕಾದ ಬೋಗಿಗಳ ತಯಾರಿಕೆಗೆ ಬಿಡ್‌ ಅಂತಿಮಗೊಳಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಯೋಜನೆಯ ಕಾಮಗಾರಿಯನ್ನೂ ಖುದ್ದಾಗಿ ಪರಿಶೀಲಿಸಲಾಗುವುದು ಎಂದು ವಿವರಿಸಿದರು.

ಈ ಯೋಜನೆಗೆ 177.22 ಎಕರೆ ಭೂಮಿ ಅಗತ್ಯವಿತ್ತು. ಈ ಪೈಕಿ ಈಗಾಗಲೇ 164 ಎಕರೆಯ ಸ್ವಾಧೀನ ಮುಗಿದಿದೆ. ಆದರೆ ಉಳಿದ 12.39 ಎಕರೆ ಭೂಮಿ ರಕ್ಷಣಾ ಇಲಾಖೆ ಮತ್ತು ಸರಕಾರದ್ದಾಗಿದ್ದು, ಸ್ವಲ್ಪ ಕಗ್ಗಂಟಾಗಿದೆ. ಕೆ-ರೈಡ್‌ ಅಧಿಕಾರಿಗಳು ಸಂಬಂಧಿಸಿದವರ ಜತೆ ಮಾತುಕತೆ ನಡೆಸಿ, ಇದನ್ನು ಬೇಗನೆ ಬಗೆಹರಿಸಬೇಕು. ಯೋಜನೆಯ ಭಾಗವಾಗಿ ಸೋಲದೇವನಹಳ್ಳಿ ಮತ್ತು ದೇವನಹಳ್ಳಿಯಲ್ಲಿ ಎರಡು ಡಿಪೋ ನಿರ್ಮಿಸಲಾಗುವುದು ಎಂದು ಸಚಿವರು ನುಡಿದರು.

ಸಭೆಯಲ್ಲಿ ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕ ಗೌರವ್‌ ಗುಪ್ತ, ಕೆ- ರೈಡ್ ಯೋಜನಾ ನಿರ್ದೇಶಕ ರಾಜೇಂದ್ರಕುಮಾರ್‍‌ ಸಿಂಗ್‌ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Dept of Heavy Industries Govt of Karnataka ಉಪನಗರ ರೈಲು ವಿಸ್ತರಣೆಯ ರೂಪುರೇಷೆ (ಬಾಕ್ಸ್‌)
ಸದ್ಯಕ್ಕೆ ಪ್ರಗತಿಯಲ್ಲಿರುವ 148 ಕಿ.ಮೀ. ವ್ಯಾಪ್ತಿಯ ಉಪನಗರ ರೈಲು ಯೋಜನೆಯಲ್ಲಿ ಒಟ್ಟು ನಾಲ್ಕು ಕಾರಿಡಾರ್‍‌ಗಳಿವೆ. ಇದು ಕ್ರಮವಾಗಿ ಬೆಂಗಳೂರು ನಗರ ರೈಲು ನಿಲ್ದಾಣದಿಂದ ದೇವನಹಳ್ಳಿ (41.4 ಕಿ.ಮೀ), ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿಯಿಂದ ವೈಟ್‌ಫೀಲ್ಡ್‌ (35.32 ಕಿ.ಮೀ) ಮತ್ತು ಹೀಳಲಿಗೆಯಿಂದ ರಾಜಾನುಕುಂಟೆವರೆಗೆ (46.25 ಕಿ.ಮೀ) ಉದ್ದವಿದೆ.
ಇದನ್ನು ಎರಡನೇ ಹಂತದಲ್ಲಿ ದೇವನಹಳ್ಳಿಯಿಂದ ಕೋಲಾರ (107 ಕಿ.ಮೀ), ಚಿಕ್ಕಬಾಣಾವರದಿಂದ ಡಾಬಸ್‌ಪೇಟೆ ಮೂಲಕ ತುಮಕೂರು (55 ಕಿ.ಮೀ), ಚಿಕ್ಕಬಾಣಾವರದಿಂದ ಮಾಗಡಿ (45 ಕಿ.ಮೀ), ಕೆಂಗೇರಿಯಿಂದ ಮೈಸೂರು (125 ಕಿ.ಮೀ), ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ (45 ಕಿ.ಮೀ), ಹೀಳಲಿಗೆಯಿಂದ ತಮಿಳುನಾಡಿನ ಹೊಸೂರು (23 ಕಿ.ಮೀ) ಮತ್ತು ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರಿನವರೆಗೆ (52 ಕಿ.ಮೀ) ವಿಸ್ತರಿಸಬೇಕೆಂಬುದು ಸಚಿವ ಎಂ ಬಿ ಪಾಟೀಲ ಅವರ ಚಿಂತನೆಯಾಗಿದೆ.
ಇದರಿಂದಾಗಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬಂದು, ಇಲ್ಲಿರುವ ಉದ್ದಿಮೆಗಳಿಗೆ ಸುತ್ತಮುತ್ತಲ ನಗರ/ಪಟ್ಟಣಗಳಿಂದ ಉದ್ಯೋಗಿಗಳು ಸುಗಮವಾಗಿ ಬಂದು ಹೋಗಬಹುದು ಎನ್ನುವುದು ಅವರ ಆಶಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...