Monday, February 2, 2026
Monday, February 2, 2026

DVS College Shivamogga ರಕ್ತದಾನದ ಬಗ್ಗೆ ಯಾವುದೇ ಭಯಪಡುವ ಅಗತ್ಯವಿಲ್ಲ- ಡಾ.ಸೆಲ್ವಮಣಿ

Date:

DVS College Shivamogga ರಕ್ತದಾನ ‌ಮಾಡುವ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ, ಯಾವುದೇ ತಪ್ಪು ಕಲ್ಪನೆ‌ ಹೊಂದಬಾರದು. ಆರೋಗ್ಯವಂತ ಯುವಜನತೆ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ‌ ರಕ್ತದಾನವು ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಸದೃಢ ಆರೋಗ್ಯಕ್ಕಾಗಿ‌ ಅರ್ಹರಿರುವ ಪ್ರತಿಯೊಬ್ಬರೂ ‌ರಕ್ತದಾನ ಮಾಡಬೇಕು. ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯವಿದೆ ಎಂದು ತಿಳಿಸಿದರು.

ರಕ್ತದ ಕೊರತೆ ಸಮಸ್ಯೆಯು ಬಹುತೇಕ ಜಿಲ್ಲೆಗಳಲ್ಲಿದ್ದು, ಶಿವಮೊಗ್ಗ ದಲ್ಲಿಯೂ ರಕ್ತದ ಕೊರತೆ ಇದೆ. ಇಂತಹ ರಕ್ತದಾನ ಕ್ಯಾಂಪ್ ಗಳನ್ನು ಹೆಚ್ಚು ಆಯೋಜಿಸುವುದರಿಂದ ರಕ್ತದ ಕೊರತೆ ಸಮಸ್ಯೆ ಸ್ವಲ್ಪಮಟ್ಟಿಗೆ ನಿವಾರಿಸಬಹುದಾಗಿದೆ. ಕೆಲವೊಂದು ಸಂದರ್ಭಗಳಲ್ಲಿ ರಕ್ತ ಸಿಗದೇ ಜೀವ ಉಳಿಸಲು ಕಷ್ಟದ ಸನ್ನಿವೇಶ ಎದುರಾಗಿರುವ ಸನ್ನಿವೇಶ ನೋಡಿದ್ದೇವೆ. ಜಿಲ್ಲಾ ಕೇಂದ್ರಗಳಲ್ಲಿ ರಕ್ತದ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು‌ ಎಂದರು.

ರಕ್ತದಾನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ತಪ್ಪು ಸಂದೇಶಗಳನ್ನು ಹರಡಿಸುತ್ತಾರೆ. ಇದು ಅತ್ಯಂತ ತಪ್ಪು‌ಕೆಲಸ. ಇಂತಹ ಕೆಲಸ ಮಾಡುವುದು ಕೂಡ ತಪ್ಪು. ಪ್ರತಿಯೊಬ್ಬರೂ ರಕ್ತದಾನ ಕುರಿತು ಗೊಂದಲ‌ ಇದ್ದಲ್ಲಿ‌ ವೈದ್ಯರ ಬಳಿ‌ ಸಮಾಲೋಚಿಸಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣುಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ಜನ್ಮದಿನದ ಸಂಭ್ರಮ ಆಚರಣೆಯನ್ನು ‌ರಕ್ತದಾನ ಮಾಡುವ ಮೂಲಕ ‌ಸಾರ್ಥಕ‌ ದಿನ ಆಗಿಸಿಕೊಳ್ಳಿ, ಜೀವ ಉಳಿಸುವ ಮಹತ್ತರ ಕಾರ್ಯದಲ್ಲಿ‌ ತೊಡಗಿಸಿಕೊಳ್ಳಬೇಕು‌ ಎಂದು ಹೇಳಿದರು.

DVS College Shivamogga ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಆರೋಗ್ಯವಂತ ಯುವ ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ರಕ್ತದಾನ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಜೀವನದ ಅವಧಿಯಲ್ಲಿ ಹೆಚ್ಚು ರಕ್ತದಾನ ಮಾಡಿ‌ ಅನೇಕ ಜೀವ ಉಳಿಸಿದ ಪುಣ್ಯ ಸಿಗುತ್ತದೆ. ಶಿಬಿರದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ರಕ್ತದಾನ ಮಾಡಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ‌ವಾಣಿಜ್ಯ ಮತ್ತು ಕೈಗಾರಿಕಾ ‌ಸಂಘದ ಸಹ‌ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ಆರೋಗ್ಯ ‌ಸದೃಢ ಆಗಲಿದ್ದು, ಯಾವುದೇ ಅಂಜಿಕೆ ಬೇಡ, ಹೃದಯಾಘಾತ ಶೇ. ೮೦ ಕಡಿಮೆ ಆಗುತ್ತದೆ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ‌ ಮಾಡಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಮೆಗ್ಗಾನ್ ರಕ್ತನಿಧಿ ಕೇಂದ್ರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ವೀಣಾ.ಎಸ್., ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ್ ಅಪ್ಪಾಜಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ನ್ಯಾಕ್ ಸಲಹೆಗಾರ ಪ್ರೊ. ಎಚ್.ಎಸ್.ಸುಧಾಕರ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ರೆಡ್‌ಕ್ರಾಸ್ ಘಟಕ ಸಂಯೋಜಕ ಶ್ರೀನಿವಾಸ್ ಲಮಾಣಿ, ಕೇತನಾ ಆರ್ತಿ, ಧರಣೇಂದ್ರ ದಿನಕರ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...