DC Shivamogga ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ.
ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ.
ಈ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಉಡುಪಿ ಮಧ್ಯೆ ಸಂಚರಿಸುವ ವಾಹನಗಳು ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದಾಗಿದೆ.
ಮಾರ್ಗ-1: ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಘಾಟ್-ಕಾರ್ಕಳ-ಉಡುಪಿ-
DC Shivamogga ಮಾರ್ಗ -2:ತೀರ್ಥಹಳ್ಳಿ -ಮಾಸ್ತಿಕಟ್ಟೆ- -ಸಿದ್ದಾಪುರ-ಕುಂದಾಪುರ- ಉಡುಪಿ ಮಾರ್ಗವನ್ನು ಬಳಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತವೂ ಕೂಡ ಪರ್ಯಾಯ ಮಾರ್ಗವನ್ನು ಸೂಚಿಸಿದೆ… ಶಿವಮೊಗ್ಗದಿಂದ ಉಡುಪಿ ಕಡೆಗೆ ಸಂಚರಿಸುವವರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲಿಸಬೇಕು.