Karnataka Sheep and Wool Development Corporation ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಕುರಿ/ಮೇಕೆ ಸಾಕಾಣಿಕೆ ಮಾಡಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂಬ ಸುಳ್ಳು ಸುದ್ಧಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನಂಬದಂತೆ ಸಾರ್ವಜನಿಕರಲ್ಲಿ ನಿಗಮದ ಸಹಾಯಕ ನಿರ್ದೇಶಕರು ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಕುರಿ/ಮೇಕೆ ತಳಿ ಸಂವರ್ಧನಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವು ಇರುತ್ತದೆ. ಇದರ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳು ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.