Saturday, November 23, 2024
Saturday, November 23, 2024

Manipur violence ಮಹಿಳೆ ಅಪಮಾನ ಪ್ರಕರಣ: ಬಿರೇನ್ ಸಿಂಗ್ ಸರ್ಕಾರ ವಜಾಗೊಳಿಸಲು ಆಗ್ರಹ

Date:

Manipur violence ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಆಡಳಿತ ಸರ್ಕಾರವನ್ನು ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ) ಬಣ ಗುರುವಾರ ರಾಷ್ಟಪತಿಗಳನ್ನು ಒತ್ತಾಯಿಸಿದರು.

ಈ ಸಂಬoಧ ಚಿಕ್ಕಮಗಳೂರು ಜಿಲ್ಲಾಡಳಿತ ಕಚೇರಿಯ ಶಿರಸ್ತೇದಾರ್ ಹೇಮಂತ್‌ಕುಮಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಸಂಸ ಮುಖಂಡರುಗಳು ಮಣಿಪುರದ ಆಡಳಿತ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ದಸಂಸ ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಮಣಿಪುರದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಬೆತ್ತಲೆ ಮೆರವಣಿಗೆ ನಡೆಸಿರುವ ಪ್ರಕರಣವು ಕಳೆದ ಮೂರು ತಿಂಗಳಿನಿoದ ಎರಡು ಜನಾಂಗೀಯ ಸಮುದಾಯದ ನಡುವೆ ಸಂಘರ್ಷವಾಗಿ ಕರಾಳ ಹಿಂಸಾಚಾರದಿoದ ಕೂಡಿದೆ ಎಂದರು.

ಮಹಿಳೆಯರಿಗೆ ಯಾವ ಮಟ್ಟದ ಅವಮಾನ ಮಾಡುವುದಕ್ಕೂ ಹೇಸದ ಮನಸ್ಥಿತಿ, ಪೊಲೀಸರು ಮತ್ತು ಅಧಿಕಾರ ಸ್ಥಾನದಲ್ಲಿರುವ ಅಸಡ್ಡೆ, ಹಿಂಸೆಗೆ ನೀಡಿದ ಕುಮ್ಮಕ್ಕು, ಮಧ್ಯಪ್ರವೇಶ ಮಾಡಲು ಕೇಂದ್ರ ಸರ್ಕಾರ ಹಿಂದೇ ಟು ಹಾಕಿರುವ ಪರಿಣಾಮ ಮಾನವೀಯತೆಯನ್ನೇ ಮರೆತಿರುವ ಸ್ಥಿತಿ ಈ ಪ್ರಕರಣದಲ್ಲಿ ವರದಿಯಾಗಿದೆ ಎಂದರು.

ಬೆತ್ತಲೆಗೊಳಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವವರೆಗೆ ಯಾವುದೇ ತನಿಖೆ ನಡೆದಿಲ್ಲ. ಆರೋಪಿಗಳನ್ನು ಬಂಧಿಸಿರಲಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸಿದಾಗ ರಾಜ್ಯ ಮತ್ತು ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಸಂಪೂರ್ಣ ಕಾನೂನು ಸುವ್ಯವಸ್ಥೆಯನ್ನು ಕಾಪಾಡದ ಮಣಿಪುರದ ಮುಖ್ಯಮಂತ್ರಿ ಬಿರೇನ್‌ಸಿಂಗ್ ಅವರ ಸರ್ಕಾರವನ್ನು ವಜಾಗೊಳಿಸಬೇಕು. ರಾಜಕೀಯ, ಸಾಮಾಜಿಕ ಮತ್ತು ಮಾನವ ಹಕ್ಕುಗಳಿಗೆ ಸಂಬoಧಿಸಿದ ಗಂಭೀರ ಪ್ರಶ್ನೆಗಳು ಹುಟ್ಟಲು ಈಗಿನ ಪರಿಸ್ಥಿತಿ ಕಾರಣವಾಗಿದೆ ಎಂದರು.

ಮಹಿಳೆಯ ಬೆತ್ತಲು ಪ್ರಕರಣ ಸಂಬoಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ತಳಮಟ್ಟದಲ್ಲಿ ಏನನ್ನು ಮಾಡಲು ಸರ್ಕಾರವೇ ಸಾಧ್ಯವಾಗುತ್ತಿಲ್ಲ ಎಂದಾದರೆ ನ್ಯಾಯಾಲಯವು ಮಧ್ಯ ಪ್ರವೇಶ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂದರು.

ಮಣಿಪುರ ಸರ್ಕಾರ ಸೂಕ್ತ ರೀತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡದಿರುವ ಪರಿಣಾಮ ಜನಾಂಗೀಯ ಸಂಘರ್ಷ ಹಿಂಸಾಚಾರದಿoದ ಕೂಡಿದೆ. ಮಣಿಪುರ ಆಡಳಿತ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಿ ರಾಷ್ಟçಪತಿ ಆಡಳಿತಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

Manipur violence ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎನ್.ಆರ್.ಪುರ ರಾಮು, ಮಹಿಳಾ ಸಂಚಾಲಕಿ ಲತಾ, ತಾಲ್ಲೂಕು ಸಂಘಟನಾ ಸಂಚಾಲಕ ಹನುಮಂತ, ಬಾಳೆಹೊನ್ನೂರು ಸಂಚಾಲಕ ಗಂಗಯ್ಯ, ಕಡೂರು ಸಂಚಾಲಕ ಪ್ರಮೋದ್, ತರೀಕೆರೆ ಸಂಚಾಲಕ ಅಣ್ಣಯ್ಯ, ಮುಖಂಡರುಗಳಾದ ಗಂಗಯ್ಯ, ಜಾರ್ಜ್, ದೇವರಾಜ್, ವೆಂಕಟೇಶ್, ರುದ್ರಮ್ಮ, ನಾಗರಾಜ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...