Pre Matric Hostel Admission ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ
2023-24 ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವವರಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು ವೆಬ್‍ಸೈಟ್ http://shp.karnataka.gov.in ನಲ್ಲಿ ಆಗಸ್ಟ್ 16 ರೊಳಗೆ ಅರ್ಜಿ ಸಲ್ಲಿಸಬೇಕು.
ಪ್ರವರ್ಗ-1, ಎಸ್.ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಪೋಷಕರ ವಾರ್ಷಿಕ ಆದಾಯ ಮಿತಿ ರೂ.1 ಲಕ್ಷ ಇರಬೇಕು.
Pre Matric Hostel Admission ಆನ್‍ಲೈನ್ ಕೌನ್ಸಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಆಗಸ್ಟ್ 21 ರಂದು ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಆಗಸ್ಟ್ 25 ಕಡೆಯ ದಿನ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://bcwd.karnataka.gov.in, ಇಮೇಲ್ ವಿಳಾಸ bcwd.hostels@karnataka.gov.in ಇಲಾಖೆಯ ಸಹಾಯವಾಣಿ ಸಂಖ್ಯೆ 8050770005/08182-222129 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.