Monday, June 23, 2025
Monday, June 23, 2025

Eshwara Khandre ಕಲ್ಯಾಣ ಕರ್ನಾಟಕಕ್ಕೆ ಕ್ರಿಯಾ ಯೋಜನೆ ರೂಪಿಸಿ- ಸಚಿವ ಈಶ್ವರ ಖಂಡ್ರೆ

Date:

Eshwara Khandre ಬೆಂಗಳೂರಿನಲ್ಲಿ ಇಂದು ನಡೆದ ಕೆ.ಕೆ.ಆರ್.ಡಿ.ಬಿ. (ಕಲ್ಯಾಣ ಕರ್ನಾಟಕ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ. ಖಂಡ್ರೆ ಭಾಗವಹಿಸಿದ್ದರು.

ಕ್ರಿಯಾಯೋಜನೆ ರೂಪಿಸಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಪಡಿಸಲು ಸಚಿವರು ಸಲಹೆ ನೀಡಿದರು.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಬಾರಿ 3 ಸಾವಿರ ಕೋಟಿ ರೂಪಾಯಿ ಮಂಜೂರಾಗಿದೆ. ವೆಚ್ಚವಾಗದೆ ಉಳಿದಿರುವ 2 ಸಾವಿರ ಕೋಟಿ ರೂಪಾಯಿ ಸೇರಿ ಒಟ್ಟು 5 ಸಾವಿರ ಕೋಟಿ ರೂ ಹಣ ಇದೆ. ಈ ಹಣವನ್ನು ಸಮರ್ಪಕವಾಗಿ ಖರ್ಚು ಮಾಡಿ ನಮ್ಮ ಭಾಗದ 7 ಜಿಲ್ಲೆಗಳ ಅಭಿವೃದ್ಧಿ ಮಾಡಬೇಕು ಎಂದರು.

ಬೆಂಗಳೂರಿನ ವಿಕಾಸಸೌಧದಲ್ಲಿಂದು ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಹಿಂದಿನ ಮೂರು ವರ್ಷಗಳಲ್ಲಿ ಹಂಚಿಕೆಯಾದ ಹಣವನ್ನೂ ವೆಚ್ಚ ಮಾಡದೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ನಿಷ್ಕ್ರಿಯವಾಗಿತ್ತು. ಈಗ ನಮ್ಮ ಸರ್ಕಾರದಲ್ಲಿ ಹಾಗೆ ಆಗಬಾರದು ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಖರ್ಚಾಗದೆ ಉಳಿದ ಹಣ ಮತ್ತು ಈ ಬಾರಿ ಹಂಚಿಕೆಯಾಗಿರುವ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ವೆಚ್ಚ ಮಾಡಲು ಮುಂಚಿತವಾಗಿಯೇ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಆಗ್ರಹಿಸಲಾಯಿತು.

ಮಾನದಂಡದ ಪ್ರಕಾರ ದೇಶದಲ್ಲಿ ಶೇ.33ರಷ್ಟು ಹಸಿರು ವಲಯ ವ್ಯಾಪ್ತಿ ಇರಬೇಕು. ರಾಜ್ಯದಲ್ಲಿ ಶೇ.21ರಷ್ಟು ಹಸಿರು ವಲಯ ವ್ಯಾಪ್ತಿ ಇದೆ. ಆದರೆ ಕಲ್ಯಾಣ ಕರ್ನಾಟಕದಲ್ಲಿ ಶೇ.10ಕ್ಕಿಂತ ಕಡಿಮೆ ಇದೆ. ಕೆ.ಕೆ.ಆರ್.ಡಿ.ಬಿ.ವತಿಯಿಂದ ಹಸಿರೀಕರಣಕ್ಕೆ 3 ಸಾವಿರ ಕೋಟಿ ರೂಪಾಯಿಗಳ ಪೈಕಿ ಶೇ.10ರಷ್ಟು ನೀಡಬೇಕು ಎಂದು ಮನವಿ ಮಾಡಲಾಯಿತು.

ಇದಕ್ಕೆ ಸಮರ್ಥಿಸಿದ ಸಚಿವ ಪ್ರಿಯಾಂಕ ಖರ್ಗೆ
, ಹಸಿರು ಗೋಡೆ ನಿರ್ಮಾಣದ ಪ್ರಸ್ತಾಪ ಈ ಹಿಂದೆಯೇ ಇತ್ತು. ಹಸಿರು ವಲಯ ಹೆಚ್ಚಾದರೆ ಮಳೆ ಚೆನ್ನಾಗಿ ಆಗುತ್ತದೆ. ತಾಪಮಾನ ಉತ್ತಮವಾಗಿರುತ್ತದೆ. ಹೀಗಾಗಿ ಕ.ಕ. ಭಾಗದ ಸಚಿವರ ಪ್ರತ್ಯೇಕ ಸಭೆ ಕರೆಯುವಂತೆ ಸಲಹೆ ನೀಡಿದರು.

Eshwara Khandre ಸಭೆಯಲ್ಲಿ ಸಚಿವರುಗಳಾದ ಶರಣ ಪ್ರಕಾಶಬಪಾಟೀಲ್ ,
ಎಸ್ ,ಬಿ.ದರ್ಶನಾಪುರ್,
ರಹೀಂ ಖಾನ್, ಶಿವರಾಜ ತಂಗಡಗಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ಯಾಲಿನಿ ರಜನೀಶ್ ಮತ್ತಿತರರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...