Monday, August 3, 2026
Monday, August 3, 2026

Siddaramaiah ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಮನ್ವಯ ಸಮಿತಿ ಸಭೆ

Date:

Siddaramaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ, ಚರ್ಚಿಸಿದರು.

ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ಚಿಂತಕ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.

Siddaramaiah ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಎಸ್.ಸಿ / ಎಸ್ ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಮಹಾಸಬಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿಗಳ ವೇದಿಕೆ, ಕರ್ನಾಟಕ ರಾಜ್ಯ ಅಲೆಮಾರಿ, ಅಲೆಮಾರಿ, ಪ್ರ-1, 46 ಜಾತಿ ಜನಾಂಗಗಳ ಒಕ್ಕೂಟ, ಕರ್ನಾಟಕ ಪ.ಜಾ ಮತ್ತು ಪ.ವರ್ಗ ಅಲೆಮಾರಿ, ಬುಡಕಟ್ಟು ಮಹಾ ಸಭಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...