Friday, March 20, 2026
Friday, March 20, 2026

Dr. Selvamani ಆಗಸ್ಟ್ 1 ರಿಂದ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ಜಾರಿ- ಡಾ.ಸೆಲ್ವಮಣಿ

Date:

Dr. Selvamani  ಆಡಳಿತದಲ್ಲಿ ದಕ್ಷತೆ, ಸ್ಥಿರತೆ ಮತ್ತು ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಗಸ್ಟ್ 1 ರಿಂದ ಅನ್ವಯಗೊಳ್ಳುವಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ,  ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸೇರಿದಂತೆ ಜಿಲ್ಲೆಯ  11 ಸ್ಥಳೀಯ ಸಂಸ್ಥೆಗಳಿಗೆ ಅನುಕುಲವಾಗುವಂತೆ ವಿನ್ಯಾಸಗೊಳಿಸಿದ ಇ-ಆಡಳಿತ ತಂತ್ರಾoಶವನ್ನು ಉದ್ಘಾಟಿಸಿದ ನಂತರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಫೀಸ್ ವ್ಯವಸ್ಥೆ ಅನುಷ್ಠಾನಗೊಳ್ಳುತ್ತಿರುವ ರಾಜ್ಯದ ಮೊದಲ ಜಿಲ್ಲೆ ಇದಾಗಿದೆ. ಸಾರ್ವಜನಿಕರ ಅಮೂಲ್ಯ ಸಮಯವನ್ನು ಉಳಿಸುವುದಲ್ಲದೆ ಅವರ ಬೇಡಿಕೆಗಳಿಗನುಗುಣವಾಗಿ ಕಾರ್ಯನಿರ್ವಹಿಸಲು ಇ-ತಂತ್ರಾoಶ ಸಹಕಾರಿಯಾಗಲಿದೆ. ಕಡತಗಳ ಅನಗತ್ಯ ವಿಳಂಬವನ್ನು ತಪ್ಪಿಸಿ, ಆಡಳಿತದಲ್ಲಿ ಗುಣಮಟ್ಟವನ್ನು ಸುಧಾರಿಸುವಲ್ಲಿ, ಪಾರದರ್ಶಕತೆ ಕಂಡುಕೊoಡು ಅಧಿಕಾರಿಗಳಿಗೆ ಹೊಣೆಗಾರಿಕೆಯನ್ನು ಸ್ಥಾಪಿಸಿ, ರಚನಾತ್ಮಕವಾಗಿ ಕಾರ್ಯನಿರ್ವಹಿಸುವಲ್ಲಿ ಸಹಕಾರಿಯಾಗಲಿದೆ. ಎಲ್ಲಾ ಅಧಿಕಾರಿಗಳು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತವನ್ನು ವೇಗಗೊಳಿಸುವ ಮಹತ್ವದ ಉದ್ಧೇಶದೊಂದಿಗೆ ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ ಎಂದ ಅವರು, ಇ-ಆಫೀಸ್ ಕಚೇರಿ ವ್ಯವಸ್ಥೆಯು ಸರಳೀಕೃತ, ಸ್ಪಂದಿಸುವ, ಪರಿಣಾಮಕಾರಿ, ಜವಾಭ್ದಾರಿಯುತ ಮತ್ತು ಪಾರದರ್ಶಕ ಕೆಲಸವನ್ನು ಸಾಧಿಸುವ ಮಾಧ್ಯಮವಾಗಿದೆ. ಇ-ಆಫೀಸ್‌ನ ವೇಗ ಮತ್ತು ದಕ್ಷತೆಯು ಇಲಾಖೆಗಳಿಗೆ ತಿಳುವಳಿಕೆಯುಳ್ಳ ಮತ್ತು ಕ್ಷಿಪ್ರ ನಿರ್ಧಾರಕ್ಕೆ ಸಹಕರಿಸುವುದಲ್ಲದೆ ಬಹುಮುಖ್ಯವಾಗಿ ಅವುಗಳನ್ನು ಕಾಗದ ರಹಿತವಾಗುವಂತೆ ಮಾಡಲಿದೆ ಎಂದು ತಿಳಿಸಿದರು.

Dr. Selvamani  ಈ ಸಂದರ್ಭದಲ್ಲಿ ಸಮುದಾಯ ಸಂಪರ್ಕಾಧಿಕಾರಿ ಮೋಹನ್‌ಕುಮಾರ್, ಇ-ಆಫೀಸ್ ಸಂಪರ್ಕಾಧಿಕಾರಿ ಅನೂಪ್, ಜಿಲ್ಲಾ ನೋಡಲ್ ಅಧಿಕಾರಿ ಸುದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...