Chamber Of Commerce Shivamogga ಆಧುನಿಕ ತಂತ್ರಜ್ಞಾನದ ಸದುಪಯೋಗದ ಜತೆಯಲ್ಲಿ ರೋಟರಿ ಸೇವಾ ಕಾರ್ಯಗಳು ಹೆಚ್ಚು ಜನರಿಗೆ ತಲುಪುವಂತಾಗಬೇಕು. ಸೇವಾ ಚಟುವಟಿಕೆಗಳು ಹೆಚ್ಚು ಜನರಿಗೆ ತಲುಪಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಡ್ವಾನ್ಸ್ಡ್ ಸ್ಕಿಲ್ ಅಕಾಡೆಮಿ ಮುಖ್ಯ ಕಾರ್ಯ ನಿರ್ವಾಹಕಿ ಸವಿತಾ ಮಾಧವ್ ಹೇಳಿದರು.
ಶಿವಮೊಗ್ಗ ರಾಜೇಂದ್ರ ನಗರದಲ್ಲಿರುವ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮೈಕ್ರೋ ಸಾಫ್ಟ್ ವೇರ್ ಕಂಪನಿಯ ಮುಖ್ಯ ಕಾರ್ಯನಿರ್ವಾಧಿಕಾರಿ ಸತ್ಯ ನಾಡೆಲ್ಲಾ ಅವರ ಲೇಖನ ” ಹಿಟ್ ರಿಫ್ರೆಷ್ ” ಎಂಬ ಪುಸ್ತಕದ ಕುರಿತು ಮಾತನಾಡಿದರು.
ಜೀವನದ ಕಹಿ ದಿನಗಳಲ್ಲೂ ಒಬ್ಬ ವ್ಯಕ್ತಿ ಸಮಾಜಕ್ಕೆ ಉತ್ತಮ ಕೊಡುಗೆ ಹೇಗೆ ಕೊಡಬಹುದು ಎಂಬ ನಿದರ್ಶನಗಳನ್ನು ವಿವರಿಸಿ, ರೋಟರಿ ಸದಸ್ಯರು ಆಧುನಿಕ ತಂತ್ರಜ್ಞಾನದ ಸವಲತ್ತುಗಳನ್ನು ಬಳಸಿಕೊಂಡು ಸಮುದಾಯದಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಉಚಿತವಾಗಿ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ರೋಟರಿ ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ನೂರಾರು ವರ್ಷಗಳಿಂದ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಬರುತ್ತಿದ್ದು, ಪೋಲಿಯೋ ನಿರ್ಮೂಲನೆ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸಿತ್ತು. ನೂರಾರು ಶಾಲೆಗಳಿಗೆ ಪರಿಕರಗಳು ನೀಡುತ್ತಾ ಬಂದಿದೆ ಎಂದು ಹೇಳಿದರು.
Chamber Of Commerce Shivamogga ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತ ಬಂದಿದೆ. ರೋಟರಿ ಸಂಸ್ಥೆಯು ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಟ್ಯಾಬ್ ನೀಡಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನವನ್ನು ಉಪಯೋಗಿಸಿ ಹೆಚ್ಚಿನ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಕಿಶೋರ್ ಕುಮಾರ್, ವಸಂತ್ ಹೋಬಳಿದಾರ್, ಶ್ರೀಕಾಂತ್, ಮಂಜುನಾಥ ಕದಂ, ವೀಣಾ ಕಿಶೋರ್, ಬಿಂದು ವಿಜಯ ಕುಮಾರ್, ಚಂದ್ರಶೇಖರಯ್ಯ, ಫ್ರೊ. ಧನಂಜಯ್, ಡಾ. ಅರುಣ್, ಡಾ. ಪರಮೇಶ್ವರ್ ಶಿಗ್ಗಾಂವ್, ಆದಿಮೂರ್ತಿ ಹಾಗೂ ಇತರೆ ಎಲ್ಲ ರೋಟರಿ ಸದಸ್ಯರು ಉಪಸ್ಥಿತರಿದ್ದರು.