Sunday, December 14, 2025
Sunday, December 14, 2025

Rotary Club Shivamogga ಟಿಸಿಎಚ್ ಓದಿ ಕೆಲಸ ಸಿಗದೇ ಬಸ್ ಏಜೆಂಟ್ ಆಗಿದ್ದೆ- ನಿವೃತ್ತ ಶಿಕ್ಷಕ ಬಸವರಾಜ್

Date:

Rotary Club Shivamogga ರೋಟರಿ ಪೂರ್ವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತರಾದ ಶಿಕ್ಷಕ ಶ್ರೀ ಬಸವರಾಜ್ .ಸಿ ಇವರಿಗೆ ಬೀಳ್ಕೊಡುಗೆ

ಶಿಕ್ಷಕರ ತರಬೇತಿ ಪರೀಕ್ಷೆಯಲ್ಲಿ ಉತ್ತೀರ್ಣನಾದ ನಂತರ ಸರ್ಕಾರಿ ಉದ್ಯೋಗ ದೊರೆಯದೇ, ಬಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ತನಗೆ ರೋಟರಿ ಪೂರ್ವ ವಿದ್ಯಾ ಸಂಸ್ಥೆಯವರು ಶಿಕ್ಷಕರ ಕೆಲಸ ನೀಡಿ ನನ್ನ ಜೀವನಕ್ಕೆ ಒಂದು ದಿಕ್ಕನ್ನು ತೋರಿಸಿ ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಹತ್‌ಕಾರ್ಯವನ್ನು ಮಾಡಲು ಅವಕಾಶ ದೊರಕಿಸಿಕೊಟ್ಟರು ಎಂದು, ಇಂದು ಸೇವೆಯಿಂದ ವಯೋನಿವೃತ್ತಿ ಹೊಂದಿದ ಶಿಕ್ಷಕ ಶ್ರೀ ಬಸವರಾಜ್ ಸಿ., ಇವರು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ (ರಿ.,), ರೋಟರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು ಏರ್ಪಡಿಸಿದ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ, ಸನ್ಮಾನ ಸ್ವೀಕರಿಸಿ ತಮ್ಮ ಅನಿಸಿಕೆಯನ್ನು ತಿಳಿಸಿದರು.


ಈ ಸಮಾರಂಭಕ್ಕೆ ರೋಟರಿ ಪೂರ್ವದ ಹಾಗೂ ಟ್ರಸ್ಟ್ನ ಪದಾಧಿಕಾರಿಗಳು ಉಭಯ ಶಾಲೆಗಳ ಶಿಕ್ಷಕ ಬಂಧು ಭಗಿನೀಯರು ಮಾತ್ರವಲ್ಲದೆ ಅವರ ಜೊತೆ ಕೆಲಸ ಮಾಡಿ ನಿವೃತ್ತರಾದ ಅನೇಕ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಪಾಲ್ಗೊಂಡು ಅನೇಕರು ಶ್ರೀಯುತರ ವ್ಯಕ್ತಿತ್ವದ ವಿವಿಧ ಆಯಾಮಗಳ ಪ್ರಶಂಶಿಸಿದರು.
Rotary Club Shivamogga ಸಮಾರAಭದ ಅಧ್ಯಕ್ಷತೆಯನ್ನು ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ರೊ. ಚಂದ್ರಶೇಖರಯ್ಯ ಎಂ., ನಿವೃತ್ತ ಡಿ.ಪಿ.ಐ. ಇವರು ವಹಿಸಿದ್ದು, ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಯಾವುದೇ ಒಂದು ಜನಾಂಗದ ಶಿಕ್ಷಣದ ಗುಣಮಟ್ಟವು ಆಯಾ ಕಾಲಘಟ್ಟದ ಶಿಕ್ಷಕರ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ ಎಂದರು.
ಸಮಾರAಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ರೊ. ಸತೀಶ್‌ಚಂದ್ರ, ಕಾರ್ಯದರ್ಶಿ ರೊ. ಕಿಶೋರ್ ಕುಮಾರ್, ಟ್ರಸ್ಟ್ನ ಕಾರ್ಯದರ್ಶಿ ರೊ. ರಾಮಚಂದ್ರ ಎಸ್.ಸಿ., ಖಜಾಂಚಿ ರೊ. ವಿಜಯ್ ಕುಮಾರ್ ಜಿ., ಜಂಟಿ ಕಾರ್ಯದರ್ಶಿ ರೊ. ನಾಗವೇಣಿ ಎಸ್.ಆರ್., ಬೋರ್ಡ್ ಆಫ್ ಟ್ರಸ್ಟಿ ರೊ. ರವಿಶಂಕರ್ ಕೆ.ಬಿ., ಪ್ರಾಂಶುಪಾಲ ಶ್ರೀ ಸೂರ್ಯನಾರಾಯಣ್ ಆರ್., ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶೀಲಾ ಬಾಯಿ ಎಸ್. ಹಾಗೂ ಶಿಕ್ಷಕವೃಂದ & ಸಿಬ್ಬಂಧಿವರ್ಗದವರು ಪಾಲ್ಗೊಂಡು ಶ್ರೀಯುತರ ಗುಣಗಾನ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...