Tuesday, June 17, 2025
Tuesday, June 17, 2025

B. Y. Raghavendra ವಿಐಎಸ್ ಎಲ್ ಪುನರಾರಂಭ :ಸಂಸದ ರಾಘವೇಂದ್ರ ಅವರ ಅವಿರತ ಯತ್ನ ಸಫಲ

Date:

B. Y. Raghavendra ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ
ಸೀತಾರಾಮನ್ ಜಿ ಮತ್ತು ಕೇಂದ್ರ ಉಕ್ಕು ಸಚಿವ ಸನ್ಮಾನ್ಯ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾಜಿ ರವರುಗಳ
ಸ್ಪಷ್ಟ ನಿರ್ದೇಶನದೊಂದಿಗೆ SAIL ಆಡಳಿತ ಮಂಡಳಿಯು ಭದ್ರಾವತಿ VISL ನಲ್ಲಿ ಉತ್ಪಾದನಾ
ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿರುವುದನ್ನು ತಿಳಿಸಲು ನನಗೆ ಅತ್ಯಂತ
ಸಂತೋಷವಾಗುತ್ತಿದೆ.

ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ
ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ.
ವಿಐಎಸ್ಎಲ್ ಅನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ
ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ, ಕೇಂದ್ರ
ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಲಾದ
ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು SAIL ಕೈಗೊಳ್ಳಲು
ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ.
VISI ನ ಪುನರುಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ
ಬದ್ಧತೆಗಾಗಿ ಕೇಂದ್ರ ಸರ್ಕಾರಕ್ಕೆ ನನ್ನ ಹತ್ತೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮುಂದಿನ ದಿನಗಳಲ್ಲಿ
VISL ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ಧಿಯ ಹಾದಿಯಲ್ಲಿ ಸಾಗಿ ತನ್ನ ಗತ ವೈಭವವನ್ನು
ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ.
ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿ.ಐ.ಎಸ್.ಎಲ್. ನ
B. Y. Raghavendra ಎಲ್ಲಾ ನೌಕರರ ಬಾಂಧವರಿಗೆ, ಕಾರ್ಮಿಕ ಸಂಘಟನೆ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ನನ್ನ
ಧನ್ಯವಾದಗಳು ಎಂದು ಸಂಸದ ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...