Thursday, June 18, 2026
Thursday, June 18, 2026

Rotary Club Shivamogga ಮಕ್ಕಳಲ್ಲಿ ಭೌದ್ಧಿಕ ಮತ್ತು ಸಾಂಸ್ಕೃತಿಕ ಆಸಕ್ತಿ ಬೆಳೆಸುವಲ್ಲಿ ಇಂಟರ್ಯಾಕ್ಟ್ ಕ್ಲಬ್ ಸಹಕಾರಿ- ಸತೀಶ್ ಚಂದ್ರ

Date:

Rotary Club Shivamogga ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವಲ್ಲಿ, ಬೌದ್ಧಿಕ ಶಕ್ತಿ ಹಾಗೂ ಸಾಂಸ್ಕೃತಿಕ ಆಸಕ್ತಿ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿಯಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ರಾಜೇಂದ್ರ ನಗರದ ರೊಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ, ಪ್ರತಿಭಾ ಪುರಸ್ಕಾರ, ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ನಾಯಕತ್ವ ಗುಣ ಹಾಘೂ ಸೇವಾ ಮನೋಭಾವನೆ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ ಆಗಿದೆ ಎಂದು ತಿಳಿಸಿದರು.

ರೋಟರಿ ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಇಂಟರ‍್ಯಾಕ್ಟ್ ಕ್ಲಬ್‌ಗಳಲ್ಲಿ ಭಾಗವಹಿಸುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶ ವಿದೇಶದ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ವೇದಿಕೆ ದೊರಕುತ್ತದೆ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

Rotary Club Shivamogga ಇದೇ ಸಂದರ್ಭದಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಿಕ್ಷನರಿ ಹಾಗೂ ನಗದು ಬಹುಮಾನ, ಲೇಖನಗಳನ್ನು ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಇಂಟರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಹರ್ಷಿತ್, ಕಾರ್ಯದರ್ಶಿ ಗಾನವಿ ಅವರು ಪದಾಧಿಕಾರಿಗಳೊಂದಿಗೆ ಅಧಿಕಾರ ಸ್ವೀಕರಿಸಿದರು.

ಅಬ್ದುಲ್ ಕಲಾಂ ಸ್ಪೇಸ್ ಕ್ಲಬ್ ಜಿಲ್ಲಾ ಘಟಕದ ಚೇರ‍್ಮನ್ ಡಾ. ಪರಮೇಶ್ವರ್ ಶಿಗ್ಗಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಡಿ., ನಾಗವೇಣಿ, ಪ್ರಾಚಾರ್ಯ ಸೂರ್ಯನಾರಾಯಣ, ಮಾಜಿ ಅಧ್ಯಕ್ಷ ಗಣೇಶ್, ಪ್ರಜ್ವಲ್, ನರಸಿಂಹಯ್ಯ, ಸುಷ್ಮಾ ಎಲ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...