Guddekal Sri Balasubrahmanya Swamy Temple ಆ.09 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‌ಗಳು ಮತ್ತು ಸಿಟಿ ಬಸ್‌ಗಳು ಹಾಗೂ ಕಾರು ವಾಹನಗಳು ಎಂ.ಆರ್.ಎಸ್. ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಕಡೆಗೆ ಹೋಗುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‌ಗಳು ಮತ್ತು ಸಿಟಿ ಬಸ್‌ಗಳು ಹಾಗೂ ಕಾರುಗಳು ಬೈಪಾಸ್ ರಸ್ತೆ ಮೂಲಕ ಹೋಗುವುದು.
ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಶಿವಮೊಗ್ಗ ನಗರಕ್ಕೆ ಒಳಬರುವ ಮತ್ತು ಹೊರಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‌ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆಯ ಮೂಲಕ ಶಿವಮೊಗ್ಗ ನಗರಕ್ಕೆ ಒಳಬರುವ ಮತ್ತು ಹೊರಹೋಗುವ ಎಲ್ಲಾ ಭಾರಿ ವಾಹನ, ಬಸ್‌ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆಯ ಮೂಲಕ ಶಿವಮೊಗ್ಗ ನಗರಕ್ಕೆ ಬರುವುದು ಮತ್ತು ಹೊರ ಹೋಗುವುದು.
ಹೊಳೆಹೊನ್ನೂರು ಸರ್ಕಲ್‌ನಿಂದ ಗುರುಪುರದ ಯಲವಟ್ಟಿ ಕ್ರಾಸ್‌ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.
Guddekal Sri Balasubrahmanya Swamy Temple ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಲಘುವಾಹನಗಳು, ಪಿಳ್ಳಂಗಿರಿ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಮತ್ತು ಹೊಳೆಬೆನವಳ್ಳಿ ತಾಂಡ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪದ ಮೂಲಕ ಬಿ.ಹೆಚ್.ರಸ್ತೆಗೆ ಸೇರಿಕೊಂಡು ಬೈಪಾಸ್ ರಸ್ತೆಯ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗುವುದು.
ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘುವಾಹನಗಳು ಬೈಪಾಸ್ ರಸ್ತೆಯ ಮಾರ್ಗವಾಗಿ ಮಲವಗೊಪ್ಪ ಯಲವಟ್ಟಿ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಪಿಳ್ಳಂಗಿರಿ ಕ್ರಾಸ್ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವುದು.
ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಕೆ.ಇ.ಬಿ. ಸರ್ಕಲ್,ಉಷಾ ನರ್ಸಿಂಗ್ ಹೋಂ ಸರ್ಕಲ್, 100 ಅಡಿರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬ್ಯೂಲೆನ್ಸ್ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿದೆ ಎಂದು ಜಿಲ್ಲಾಧಿಕಾರಿಗಳ ಆದೇಶ ಸೂಚಿಸಿದೆ.