Sunday, August 2, 2026
Sunday, August 2, 2026

ZP Shivamogga ಕೋಟೆಗಂಗೂರು ಗ್ರಾಪಂ ಅಧ್ಯಕ್ಷ & ಉಪಾಧ್ಯಕ್ಷರ ಆಯ್ಕೆ

Date:

ZP Shivamogga ಶಿವಮೊಗ್ಗ ತಾಲ್ಲೂಕು ಕೋಟೆಗಂಗೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ದೇವಕಾತಿಕೊಪ್ಪದ ಡಿ.ಬಿ. ವಿಜಯಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ವಿಜಯಕುಮಾರ್ ಅವರನ್ನೇ ಈ ಬಾರಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಾಗಿದ್ದು ಕೋಟೆ ಗಂಗೂರು ಗ್ರಾಮ ಪಂಚಾಯತಿ ಸದಸ್ಯ ರೇಖಾ ಬಾಯಿ ಅವರು ಈ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದು ಇಬ್ಬರ ಆಯ್ಕೆಗೆ ಗ್ರಾಪಂ ಸದಸ್ಯರು ಬೆಂಬಲಿಸಿದ್ದಾರೆ.

ZP Shivamogga ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ. ಕಾಂತರಾಜ್ ಅವರು ಕರ್ತವ್ಯ ನಿರ್ವಹಿಸಿದ್ದು, ಇಂದು ಮಧ್ಯಾಹ್ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.

ಈ ಸಂದರ್ಭಗಳಲ್ಲಿ ಗ್ರಾಮ ಪಂಚಾಯತಿಯ ಸದಸ್ಯರುಗಳಾದ ಕಮಲಿ ಬಾಯಿ, ಕವಿತಾ ಬಾಯಿ, ಶಾಂತಿ ಬಾಯಿ, ದೂದ್ಯಾನಾಯ್ಕ್, ಪಿಡಿಓ ಶಿವಕುಮಾರ್ ಹೆಚ್, ಕಾರ್ಯದರ್ಶಿ ಸೀತಾನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...