Monday, December 15, 2025
Monday, December 15, 2025

Kannada Sahitya Parishath ಮನೆ & ಅಂಗಡಿಗಳ ಮೇಲೆ ಕನ್ನಡ ಬಾವುಟ ಹಾರಿಸಿ ಅಭಿಯಾನಕ್ಕೆ ಚಾಲನೆ

Date:

Kannada Sahitya Parishath ಮೈಸೂರು ರಾಜ್ಯವನ್ನು ಜಯಚಾಮರಾಜೇಂದ್ರ ಒಡೆಯರ್ ಅವರು ದೇಶದ ಒಕ್ಕೂಟಕ್ಕೆ ವಿಲೀನಗೊಳಿಸಿ ಸಮರ್ಪಿಸಿದ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಜಿಲ್ಲಾ ಘಟಕ ಏರ್ಪಡಿಸಿದ್ದ ಮನೆ ಮನೆಯ ಅಂಗಡಿಗಳ ಮೇಲೆ ಕನ್ನಡ ಬಾವುಟ ಎಂಬ ಅಭಿಯಾನ ಕಾರ್ಯಕ್ರಮಕ್ಕೆ ನಗರದ ಹನುಮಂತಪ್ಪ ವೃತ್ತದಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಕನ್ನಡ ಭಾಷೆಯ ಮೇಲೆ ಅಪಾರವಾದ ಅಭಿಮಾನವನ್ನು ಹೊಂದಿರುವ ಕಾರ್ಮಿಕÀ ಪರಿಷತ್ತು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸುವ ಕಾರ್ಯಕ್ಕೆ ಕೈಹಾಕಿರುವುದು ಉತ್ತಮ ಸಂಗತಿ. ಇಂತಹ ಭಾಷಾಭಿಮಾನದ ಕಂಪನ್ನು ಇಡೀ ರಾಜ್ಯಾದ್ಯಂತ ಆಚರಿಸುತ್ತಿರುವುದು ಸಂತಸದ ವಿಷಯ ಎಂದರು.

ಪ್ರಸ್ತುತ ವಿವಿಧ ಹಳ್ಳಿಗಳಲ್ಲಿ ಹಾಗೂ ಗ್ರಾಮಾಂತರ ಶಾಲೆಗಳಲ್ಲಿ ಕನ್ನಡ ಬಳಕೆ ಉತ್ತಮವಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು. ಆಂಗ್ಲಮಾಧ್ಯಮ ಶಾಲೆಯ ಮುಖ್ಯಸ್ಥರು ಸಹ ಕನ್ನಡ ಭಾಷೆಯ ಕಲಿಕೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಮೂಲಕ ಭಾಷೆ ಬೆಳೆವಣ ಗೆಗೆ ಸಹಕರಿಸಬೇಕು ಎಂದು ಸಲಹೆ ಮಾಡಿದರು.

ಕನ್ನಡ ಕಂಪನ್ನು ಹರಡಿಸುವ ನಿಟ್ಟಿನಲ್ಲಿ ಕಾರ್ಮಿಕ ಪರಿಷತ್ತು ಹಾಗೂ ಕನ್ನಡಪರ ಸಂಘಟನೆಗಳು ಅತಿಹೆಚ್ಚು ಪ್ರಾಮುಖ್ಯತೆಯಿಂದ ಕೆಲಸ ಮಾಡಬೇಕಿದೆ. ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮವು ಮುಂದಿನ ನವೆಂಬರ್ ಕನ್ನಡ ರಾಜ್ಯೋತ್ಸವದಿಂದ ಅಂತ್ಯದವರೆಗೂ ಮುಂದುವರೆಯಸಬೇಕು ಎಂದು ಆಶಿಸಿದರು.

Kannada Sahitya Parishath ರಾಜಧಾನಿ ಬೆಂಗಳೂರಿನ ಮಹಾನಗರ ಪಾಲಿಕೆಗಳಲ್ಲೂ ಇಂತಹ ಕಾರ್ಯಕ್ರಮ ಮಾಡುವುದು ಅತಿಮುಖ್ಯ. ಇತರೆ ರಾಜ್ಯಗಳಿಂದ ಕಾರ್ಮಿಕರು ಹಾಗೂ ಸಾರ್ವಜನಿಕರು ದುಡಿಮೆಗಾಗಿ ಆಗಮಿಸುವ ನಿಟ್ಟಿನಲ್ಲಿ ಭಾಷೆಯ ಅರಿವು ಮೂಡಿಸಬೇಕು. ರಾಜ್ಯದ ಪ್ರತಿಯೊಬ್ಬ ಕನ್ನಡಾಭಿಮಾನಿಗಳು ಭಾಷೆ ಬೆಳವಣಿಗೆಗೆ ನಿರಂತರವಾಗಿ ತೊಡಗಿಸಿ ಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಪರಿಷತ್ತು ಅಧ್ಯಕ್ಷ ಸಿ.ಚನ್ನಕೇಶವ ಮಾತನಾಡಿ ಮೈಸೂರು ರಾಜ್ಯವನ್ನು ದೇಶಕ್ಕೆ ವಿಲೀನಗೊ ಳಿಸಿ ಒಪ್ಪಿಸಿದಂತಹ ದಿನವನ್ನು ರಾಜ್ಯಾದ್ಯಂತ ಕಾರ್ಮಿಕ ಪರಿಷತ್ತು ಆಚರಣೆ ನಡೆಸುತ್ತಿದೆ. ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಇಂತಹ ಕಾರ್ಯಚಟುವಟಿಕೆಗಳಲ್ಲಿ ತೊಡಗಿ ಭಾಷೆಯ ಕಂಪನ್ನು ಮನ ಮುಟ್ಟುವಂತೆ ಸಮಾಜದಲ್ಲಿ ಪಸರಿಸಬೇಕು ಎಂದರು.

ಜಿಲ್ಲಾ ಘಟಕದಿಂದ ವತಿಯಿಂದ ಸುಮಾರು ಎರಡು ಸಾವಿರ ಕನ್ನಡ ಬಾವುಟವನ್ನು ಜಿಲ್ಲೆಯ ಎಲ್ಲಾ ಧರ್ಮದವರಿಗೆ ವಿತರಿಸಲಾಗಿದ್ದು, ಸಾರ್ವಜನಿಕರು ತಮ್ಮ ಮನೆ ಮತ್ತು ವಾಣ ಜ್ಯ ಮಳಿಗೆಗಳ ಮೇಲೆ ಕನ್ನಡ ಬಾವು ಟವನ್ನು ರಾರಾಜಿಸುವಂತೆ ಹಾರಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ನಗರದ ಹನುಮಂತಪ್ಪ ವೃತ್ತದಿಂದ ಎಂ.ಜಿ.ರಸ್ತೆ, ಐ.ಜಿ.ರಸ್ತೆ ಮುಖಾಂತರ ಬೈಕ್ ಜಾಥಾ ನಡೆಸ ಲಾಯಿತು. ಈ ಸಂದರ್ಭದಲ್ಲಿ ಪರಿಷತ್ತು ಉಪಾಧ್ಯಕ್ಷ ಕೆ.ಕೆ.ಧರ್ಮಚಾರಿ, ಕಾರ್ಯಾಧ್ಯಕ್ಷ ಅರವಿಂದ್ ರಾಜ್, ಸಂಘಟನಾ ಕಾರ್ಯದರ್ಶಿಗಳಾದ ಯೋಗೀಶ್‌ಶೆಟ್ಟಿ, ಸಿ.ಎಸ್.ಆದರ್ಶ, ಸದಸ್ಯರುಗಳಾದ ಶ್ರೀಧರ್‌ಆಚಾರ್, ವೀಣಾ, ಶಿವಕು ಮಾರ್, ಮಹೇಶ್ ಆಚಾರ್, ಸುನೀಲ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...