Saturday, June 21, 2025
Saturday, June 21, 2025

Rashtriya Lok Adalat ಸೆಪ್ಟೆಂಬರ್ 9 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

Date:

Rashtriya Lok Adalat ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಲ್ಲಿ ಇಡೀ ರಾಜ್ಯಾದ್ಯಾಂತರ ದಿ: 09.09.2023 ರಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ನಡೆಸಲಾಗುತ್ತದೆ. ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳನ್ನು ಒಳಗೊಂಡ0ತೆ ಎಲ್ಲಾ ನ್ಯಾಯಾಲಯಗಳಲ್ಲೂ ಏಕ ಕಾಲದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ.

ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನಗಳ, ಕೌಟುಂಬಿಕ, ಭೂ ಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೊಂದಣಿ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕು ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಲು ಅವಕಾಶ ಇದ್ದು, ಸಂಬ0ಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಬಹುದಾಗಿದೆ. ಇದರ ಸದುಪಯೋಗ ಕಕ್ಷಿಗಾರರು ಪಡೆಯ ಬಹುದಾಗಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಿ:11-2-2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸಂಚಾರಿ ಇ -ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯತಿ ನೀಡಿ ಸರ್ಕಾರವು ಆದೇಶ ಹೊರಡಿಸಿರುತ್ತದೆ. ಈ ರೀತಿಯು ದಿ:09-09-2023ರವರೆಗೆ ಇತ್ಯಾರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ.

Rashtriya Lok Adalat ರಾಜೀ ಪ್ರಕ್ರಿಯೆಯಿಂದ ಸಮಯ ಮತ್ತು ಹಣವನ್ನು ಉಳಿಸಬಹುದಾಗಿದೆ. ಹಾಗೂ ಉಭಯ ಪಕ್ಷಗಾರರ ನಡುವಿನ ಬಾಂಧವ್ಯವು ವೃದ್ಧಿಸುವುದು. ಆದುದರಿಂದ ಕಕ್ಷಿಗಾರರು ಲೋಕ ಅದಾಲತ್‌ನಲ್ಲಿ ಪಾಲ್ಗೊಳುವ ಅನುಕೂಲವನ್ನು ಪಡೆಯುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎನ್. ಚಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...