Karnataka Lokayukta ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಸುಮಾರು 16 ವಿಷಯಗಳ ಮೇಲೆ ಚರ್ಚೆ ನಡೆಯಿತು.
Karnataka Lokayukta ಲೋಕಾಯುಕ್ತ ಪ್ರಕರಣ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ.ಹೆಚ್.ನಾಗೇಶ್ ಅವರಿಗೆ 5 ವರ್ಷ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ವಜಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
ಅಲ್ಲದೇ ಲೋಕಾಯುಕ್ತ ಕೇಸ್ ನಲ್ಲಿ ಸಿಕ್ಕಿಬಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂದಲಗಿ, ಇಂದಿರಾ ನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ.ನಾಗಮಣಿ ಅವರ ಕಡ್ಡಾಯ ನಿವೃತ್ತಿಗೆ ಸಂಪುಟ ನಿರ್ಣಯ ಕೈಗೊಂಡಿದೆ.