Thursday, June 18, 2026
Thursday, June 18, 2026

Rotary Club Shivamogga Malenadu ನಿವೃತ್ತರಿಗೆ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರ ಉಪಯುಕ್ತ- ವಿಜಯ್ ಸಾಯಿ

Date:

Rotary Club Shivamogga Malenadu ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ವಿಜಯ್ ಸಾಯಿ ಹೇಳಿದರು.

ಶಿವಮೊಗ್ಗ ನಗರದ ಗೋಪಾಳ ಭವನದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಎಸ್‌ಬಿಐ ಪೆನ್ಷನರ‍್ಸ್ ಕಮ್ಯೂನ್ ಸದಸ್ಯರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ನಿವೃತ್ತ ನೌಕರರಿಗೆ ಉಪಯುಕ್ತ ಆಗಲೆಂದು ಆಯೋಜಿಸಿರುವ ಆರೋಗ್ಯ ತಪಾಸಣಾ ಕಾರ್ಯಕ್ರಮ ಅತ್ಯಂತ ಶ್ಲಾಘನೀಯ. ಇದರಿಂದ ನೂರಾರು ಜನರಿಗೆ ಅನುಕೂಲವಾಗುತ್ತದೆ. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ತಂಡವು ನಿರಂತರವಾಗಿ ಇಂತಹ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.

Rotary Club Shivamogga Malenadu ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ರಾಜು ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸರ್ಕಾರಿ ಶಾಲೆಗಳಿಗೆ ನೆರವು ಸೇರಿದಂತೆ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಬರುತ್ತಿದೆ. ನಿವೃತ್ತ ನೌಕರರಿಗೆ ಅನುಕೂಲ ಒದಗಿಸಲು ವಿಶೇಷ ಶಿಬಿರ ನಡೆಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ದಂತ ತಪಾಸಣೆ, ಇಸಿಜಿ, ಮೂಳೆಗೆ ಸಂಬಂಧಪಟ್ಟ ತಪಾಸಣೆ, ಬಿಪಿ, ಶುಗರ್ ತಪಾಸಣೆ ಸೇರಿದಂತೆ ವಿವಿಧ ರೀತಿಯ ಪರೀಕ್ಷೆ ನಡೆಸಲಾಯಿತು.

ಆರೋಗ್ಯ ಸದೃಢತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವೈದ್ಯರು ಸಲಹೆ ನೀಡಿದರು.
ಎಸ್‌ಬಿಐ ಪೆನ್ಷನರ‍್ಸ್ ಕಮ್ಯೂನ್ ಅಧ್ಯಕ್ಷ ಕೆ.ಟಿ.ಶ್ರೀನಿವಾಸ್, ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಕಾರ್ಯದರ್ಶಿ ಪ್ರಕಾಶಮೂರ್ತಿ, ಮಂಜುಳಾ ರಾಜು, ಶ್ರೀನಿವಾಸ ಪುರಾಣಿಕ್, ಶಿವಮೂರ್ತಿ, ಜಗದೀಶ್, ಮಮತಾ, ಡಾ. ಶ್ರೀನಿವಾಸ್, ಡಾ. ಶರತ್, ಡಾ. ಉಷಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...