Wednesday, June 25, 2025
Wednesday, June 25, 2025

Rotary Shivamogga ಮಕ್ಕಳಲ್ಲಿ ವಿದ್ಯಾರ್ಥಿ ಜೀವನದ ಜೊತೆಗೆ ಸಮಾಜಸೇವಾ ಮನೋಭಾವನೆ ರೂಢಿಸಬೇಕು- ಡಾ.ಕಡಿದಾಳ್ ಗೋಪಾಲ್

Date:

Rotary Shivamogga ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು ಶ್ರೀನಿಧಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಹೇಳಿದರು.

ಶಿವಮೊಗ್ಗ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಲೇಖನ ಸಾಮಾಗ್ರಿ ವಿತರಣೆ ಹಾಗೂ ಇಂಟರಾಕ್ಟ್ ಕ್ಲಬ್ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪುಸ್ತಕ ಕಲಿಕೆಯ ಜತೆಯಲ್ಲಿ ಸಾಮಾನ್ಯ ಜ್ಞಾನ, ಕ್ರೀಡೆ, ಕಲಾಪ್ರಕಾರಗಳ ಕಲಿಕೆಯಲ್ಲೂ ಆಸಕ್ತಿ ತೋರಿಸುವಂತೆ ಪ್ರೋತ್ಸಾಹ ನೀಡಬೇಕು. ಇದರಿಂದ ವಿದ್ಯಾರ್ಥಿಗಳ ಆಲೋಚನಾ ಕ್ರಮ ಹಾಗೂ ಕ್ರೀಯಾತ್ಮಕ ಶಕ್ತಿ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಸೇವಾ ಮನೋಭಾವನೆ ಬೆಳೆಸುವಲ್ಲಿ ವಿದ್ಯಾರ್ಥಿ ಕ್ಲಬ್‌ಗಳು ಸಹಕಾರಿ ಆಗುತ್ತವೆ. ರೋಟರಿ ಸಂಸ್ಥೆ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಿಸಲಾಗುತ್ತಿದೆ ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಇಂಟರಾಕ್ಟ್ ಕ್ಲಬ್ ಮುಖಾಂತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Rotary Shivamogga ಎಸ್‌ಎಸ್‌ಎಲ್‌ಸಿಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ಶ್ರೀಕಂಠಯ್ಯ ಅವರು ತಲಾ 10 ಸಾವಿರ ರೂ. ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 12 ಸಾವಿರ ರೂ. ನಗದು ಬಹುಮಾನ ನೀಡಲಾಯಿತು. ಇನ್ನರ್‌ವ್ಹೀಲ್ ಕ್ಲಬ್ ಕಾರ್ಯದರ್ಶಿ ಡಿ.ಬಿ.ವಾಗ್ದೇವಿ ಶಬ್ಧಕೋಶ, ಪೆನ್‌ಗಳನ್ನು ವಿತರಿಸಿದರು.
ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಶಬರಿ ಕಡಿದಾಳ್, ವಿಜಯಾ ರಾಯ್ಕರ್, ಆಡಳಿತಾಧಿಕಾರಿ ಟಿ.ಪಿ.ನಾಗರಾಜ್, ಪ್ರಾಚಾರ್ಯ ಗುರುಮೂರ್ತಿಗೌಡ, ಗಣೇಶ್ ಎಸ್., ವಿದ್ಯಾರ್ಥಿ ಸಂಘದ ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷೆ ಛಾಯಾ, ಕಾರ್ಯದರ್ಶಿ ಸೃಜನ್ ಭೂಷಣ್, ಉಪಾಧ್ಯಕ್ಷ ತ್ಯಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...