Monday, December 15, 2025
Monday, December 15, 2025

ಸಕಾರಾತ್ಮಕ ಕೆಲಸಮಾಡಿದರೆ ಯಶಸ್ಸು ಖಂಡಿತ- ಉಮೇಶ್ ಹಾಲಾಡಿ

Date:

Department of Kannada and Culture ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು. ಸಕರಾತ್ಮಕ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಿಶ್ಚಿತ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು.

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಎಟಿಎನ್‌ಸಿಸಿ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಗೌರವ ಸಮರ್ಪಣೆ, ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಭೆ ಪ್ರದರ್ಶಿಸಲು ಸಿಗುವ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಂಡು ಹಂತ ಹಂತವಾಗಿ ಸಾಧನೆ ಮಾಡಬೇಕು. ಉತ್ತಮ ಜೀವನ ರೂಪಿಸಿಕೊಳ್ಳಲು ಸಾಂಸ್ಕೃತಿಕ ವೇದಿಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

Department of Kannada and Culture ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಸ್ವಾಮಿ ಎಂ.ಟಿ. ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸೌಲಭ್ಯ ಹಾಗೂ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಸಾಧನೆ ಮಾಡುವುದಕ್ಕೆ ನೆರವಾಗುವ ಅಂಶಗಳ ಬಗ್ಗೆ ಆದ್ಯತೆ ನೀಡಬೇಕು. ಶಿಕ್ಷಣದ ನಂತರ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ಆಧುನಿಕ ಯುಗದಲ್ಲಿ ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ತಂತ್ರಜ್ಞಾನದ ನೆರವಿನಿಂದ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಟಿಎನ್‌ಸಿಸಿ ಕಾಲೇಜಿನ ಪ್ರಾಚಾರ್ಯೆ ಪ್ರೊ. ಮಮತಾ ಪಿ.ಆರ್. ಮಾತನಾಡಿ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕೀರ್ತಿಯನ್ನು ವಿದ್ಯಾರ್ಥಿಗಳು ಹೆಚ್ಚಿಸಿದ್ದಾರೆ ಎಂದು ತಿಳಿಸಿದರು.

ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು. ಸಮಾರಂಭದಲ್ಲಿ ಫ್ರೊ. ಜಗದೀಶ್, ಫ್ರೊ. ಕೆ.ಎಂ.ನಾಗರಾಜು, ಗಾಯತ್ರಿ, ಪ್ರವೀಣ್.ಬಿ.ಎನ್., ಗಿರಿಜಾ ಹೊಸಮನಿ, ಲಲಿತಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...