Tuesday, February 3, 2026
Tuesday, February 3, 2026

Devaraja Arasu Jayanti ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜಯಂತಿ

Date:

Devaraja Arasu Jayanti ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪ್ರಗತಿಪರ ಸಾಧನೆಗಳ ಸರದಾರ-ಸಾಮಾಜಿಕ ಪರಿವರ್ತನೆಯ ಹರಿಕಾರ-ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು
ದಿ: 20-08-2023 ರಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪನವರು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ(ಚೆನ್ನಿ) ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರು, ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ, ಸಂಘಟನೆಗಳ ಮುಖಂಡರು, ಇತರೆ ಅಧಿಕಾರಿಗಳು ಪಾಲ್ಗೊಳ್ಳುವರು.

Devaraja Arasu Jayanti ದಿ; 20-08-2023 ರಂದು ಬೆಳಿಗ್ಗೆ 9.30 ಕ್ಕೆ ನಗರದ ಸೈನ್ಸ್ ಮೈದಾನದಿಂದ ಡಿ.ದೇವರಾಜ ಅರಸು ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಜನಪದ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಏರ್ಪಡಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...